ಕರ್ನಾಟಕ

karnataka

ETV Bharat / state

ಕೃಷಿ ತಂತ್ರಜ್ಞಾನ ಕುರಿತು ಇಸ್ರೇಲ್ ಪ್ರತಿನಿಧಿಗಳ ಜೊತೆ ಚರ್ಚಿಸಿದ ಸಚಿವ ಬಿ.ಸಿ.ಪಾಟೀಲ್ - Israel Consulate General Jonathan Judka

ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಇಸ್ರೇಲ್​ನ ಟೆಲಿವಿವಾ ವಿಶ್ವವಿದ್ಯಾಲಯ, ಮಾಶೋಮ್ ತರಬೇತಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಇಸ್ರೇಲ್ ಪ್ರತಿನಿಧಿಗಳು ಕೃಷಿ ಸಚಿವ ಬಿ.ಸಿ.ಪಾಟೀಲ್​ರೊಂದಿಗೆ ಮನವಿ ಮಾಡಿಕೊಂಡರು.

Agriculture Minister BC Patel talks with Israeli Representatives
ಇಸ್ರೇಲ್ ಜನಪ್ರತಿನಿಧಿಗಳ ಜೊತೆ ಚರ್ಚಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

By

Published : Dec 4, 2020, 6:07 PM IST

ಬೆಂಗಳೂರು: ಕೃಷಿ ತಂತ್ರಜ್ಞಾನ ಕುರಿತು ಇಸ್ರೇಲ್ ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಹಾಗೂ ಮಿಷನ್ ಉಪ ಮುಖ್ಯಸ್ಥ ಏರಿಯನಲ್ ಸೀಡ್ಮನ್, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಇಂದು ಭೇಟಿ ಮಾಡಿದ ಇಸ್ರೇಲ್ ಪ್ರತಿನಿಧಿಗಳು, ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ಸಹಭಾಗಿತ್ವ ಮತ್ತು ಮುಂದಿನ ದಾರಿ ಕುರಿತು ಮಹತ್ವದ ಚರ್ಚೆ ನಡೆಸಿದರು.

ಇಸ್ರೇಲ್ ಪ್ರತಿನಿಧಿಗಳ ಜೊತೆ ಚರ್ಚಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

ಇದನ್ನೂ ಓದಿ:ಅರುಣ್ ಸಿಂಗ್ ಜೊತೆ ಚರ್ಚಿಸಿದ ಬಳಿಕವೇ ಸಂಪುಟ ವಿಸ್ತರಣೆ : ಸಿಎಂ ಬಿಎಸ್​ವೈ

ಕೊಡಗಿನಲ್ಲಿ ಆಧುನಿಕ ಸೆನ್ಸಾರ್ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಈಗಾಗಲೇ ಇಸ್ರೇಲ್ ಸಹಭಾಗಿತ್ವದಲ್ಲಿ ಕಾಫಿ ಬೆಳೆಯಲ್ಲಿ ಅಳವಡಿಸಲಾಗುತ್ತಿದ್ದು, ಇದನ್ನು ರಾಜ್ಯದ ಬೇರೆ ಜಿಲ್ಲೆಗಳ ಕೃಷಿಯಲ್ಲಿ ಅಳವಡಿಸುವ ಬಗ್ಗೆ ಹಾಗೂ ಕರ್ನಾಟಕದಲ್ಲಿ ಇದಕ್ಕೆ ಉತ್ತೇಜನ ನೀಡಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಇಸ್ರೇಲ್​ನ ಟೆಲಿವಿವಾ ವಿಶ್ವವಿದ್ಯಾಲಯ, ಮಾಶೋಮ್ ತರಬೇತಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಸಚಿವರ ಜೊತೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ರೈತರನ್ನು ರೈತೋದ್ಯಮಿಗಳನ್ನಾಗಿಸಲು ಕೃಷಿ ನವೋದ್ಯಮ ಇಲಾಖೆ ಹಾಗೂ ಕೃಷಿ ಸಚಿವರು ಉತ್ತೇಜನ ನೀಡುತ್ತಿರುವುದಕ್ಕೆ ಇಸ್ರೇಲ್ ಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಕೋಲಾರದಲ್ಲಿ ಅತ್ಯಂತ ಕಡಿಮೆ ನೀರಿನಲ್ಲಿಯೇ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತರು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದರು. ರಾಜ್ಯದಲ್ಲಿ ಕೋಲಾರ ಸಮಗ್ರ ಕೃಷಿ ಪದ್ಧತಿಯಡಿಯಲ್ಲಿಯೇ ಇಸ್ರೇಲ್ ತಂತ್ರಜ್ಞಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುವ ಬಗ್ಗೆ ಪ್ರತಿನಿಧಿಗಳ ಜೊತೆ ಮಾಹಿತಿ ಹಂಚಿಕೊಂಡರು.

For All Latest Updates

TAGGED:

ABOUT THE AUTHOR

...view details