ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿಬೇಕು. ಅಲ್ಲಿ ಅವರಿಗೆ ಚಿಕಿತ್ಸೆ ಕೊಡಿಸುವುದು ಒಳ್ಳೆಯದು ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಗರಂ ಆದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಪ್ರಾಯೋಜಿತ ಅನ್ನೋದು ಸ್ಪಷ್ಟವಾಗುತ್ತಿದೆ. ಆ ಮನುಷ್ಯನನ್ನು ಮೆಂಟಲ್ ಆಸ್ಪತ್ರೆ ಕಳಿಸೋದು ಒಳಿತು. ನ್ಯಾಯಾಂಗ ತನಿಖೆ ಆಗಬೇಕು ಅಂತಾರೆ. ಅವರು ಕಂಪ್ಲೆಂಟ್ ಕೊಡಬೇಕಲ್ಲ ಎಂದು ಪ್ರಶ್ನಿಸಿದ ಅವರು, ದಾಖಲೆ ಕೊಟ್ಟರೆ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಮಾನನಷ್ಟ ಮೊಕದ್ದಮೆ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ.. ಕೃಷಿ ಸಚಿವ ಬಿಸಿ ಪಾಟೀಲ್ ಗರಂ - ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸುವುದು ಒಳ್ಳೆಯದು ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಗರಂ ಆದ ಪ್ರಸಂಗ ಬೆಂಗಳೂರಿನಲ್ಲಿ ಕಂಡು ಬಂತು.
ಕೃಷಿ ಸಚಿವ ಬಿಸಿ ಪಾಟೀಲ್ ಗರಂ