ಬೆಂಗಳೂರು:ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಜನವರಿ 28ರಂದು ಬೃಹತ್ ಅಹಿಂದ ಸಮಾವೇಶ ನಡೆಸಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ನಿರ್ಧರಿಸಿದೆ. ಚಿತ್ರದುರ್ಗದಲ್ಲಿ ಸಮಾವೇಶ ಆಯೋಜಿಸಲಾಗಿದೆ.
ಶೋಷಿತರ ಜಾಗೃತಿ ಸಮಾವೇಶ ಎಂಬ ಹೆಸರಿನಡಿ ಸಮಾವೇಶ ಆಯೋಜಿಸಲಾಗುತ್ತಿದೆ. ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಕಾರ್ಯಕ್ರಮ ಏರ್ಪಾಡಾಗಿದೆ.
ಜಾತಿ ಗಣತಿ ಸಂಬಂಧ ಪ್ರಬಲ ಸಮುದಾಯಗಳ ವಿರೋಧಕ್ಕೆ ಸೆಡ್ಡು ಹೊಡೆಯಲು ಅಹಿಂದ ಸಮಾವೇಶ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಆಹ್ವಾನ ನೀಡುವ ಮೂಲಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಕುತೂಹಲ ಮೂಡಿಸಿದೆ. ಅಲ್ಪಸಂಖ್ಯಾತ, ದಲಿತ, ಎಸ್ಸಿ, ಎಸ್ಟಿ ಸಮುದಾಯದ ರಾಜಕೀಯ ನಾಯಕರಿಗೂ ಆಹ್ವಾನ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಮಾವೇಶ ವೇದಿಕೆಯಾಗಲಿದೆ.
ಅಹಿಂದ ಹಕ್ಕೊತ್ತಾಯಗಳೇನು?:
- ಹೆಚ್.ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥಾವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
- ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
- EWS ಶೇ.10 ಮೀಸಲಾತಿಯನ್ನು ರದ್ದುಪಡಿಸುವಂತೆ ಒತ್ತಾಯಿಸುವುದು.
- ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳಮೀಸಲಾತಿ ಕಲ್ಪಿಸಬೇಕು.
- ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು.
- ಜನಸಂಖ್ಯೆಗೆ ಅನುಗುಣವಾಗಿ ಶೇಕಡಾವಾರು ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.
ಇದನ್ನೂ ಓದಿ:ಹೆದ್ದಾರಿಯಲ್ಲಿ ಆವರಿಸಿದ ಮಂಜು: ಲಾರಿ - ಬಸ್ಗಳ ನಡುವೆ ಸರಣಿ ಅಪಘಾತ, 30 ಮಂದಿಗೆ ಗಾಯ