ಬೆಂಗಳೂರು: ನಗರದ ಕುಮಾರ ಕೃಪ ಅತಿಥಿಗೃಹಕ್ಕೆ ಇಂದು ಆಗಮಿಸಲಿರುವ ಉಭಯ ನಾಯಕರು ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣವನ್ನು ಅರಿಯಲಿರುವ ನಾಯಕರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಸ್ವೀಕಾರ ಇಲ್ಲವೇ ವಾಪಸ್ ಪಡೆಯುವಂತೆ ಸೂಚಿಸುವ ಕುರಿತು ರಾಜ್ಯ ಕಾಂಗ್ರೆಸ್ ನಾಯಕರಿಂದ ಮಾಹಿತಿ ಪಡೆಯಲಿದ್ದಾರೆ. ಒಂದೊಮ್ಮೆ ರಾಜೀನಾಮೆ ಅಂಗೀಕರಿಸುವ ನಿರ್ಧಾರ ಕೈಗೊಂಡರೆ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು ಸೂಕ್ತ ಆಗಲಿದ್ದಾರೆ ಎಂಬ ಮಾಹಿತಿ ಪಡೆಯಲಿದ್ದಾರೆ.