ಬೆಂಗಳೂರು : ನೋಸ್ ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫ್ಲೈ ಬೈ ವೈರ್ ಪ್ರೀಮಿಯರ್ 1ಎ ವಿಮಾನವು ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣದಲ್ಲಿಂದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಚಕ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ತುರ್ತಾಗಿ ಎಚ್‌ಎಎಲ್‌ನಲ್ಲೇ ಲ್ಯಾಂಡ್ ಆಗಿದೆ. ವಿಮಾನ ತುರ್ತು ಭೂಸ್ಪರ್ಶವಾಗುವ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿವೆ. ಲ್ಯಾಂಡಿಂಗ್ ವೇಳೆ ವಿಮಾನ ಮಗುಚಿ ಬೀಳುವ ಹಂತಕ್ಕೆ ಹೋಗಿದ್ದು, ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದು, “ಎ ಫ್ಲೈ ಬೈ ವೈರ್ ಪ್ರೀಮಿಯರ್ 1 ಎ ಏರ್‌ಕ್ರಾಫ್ಟ್ ವಿಟಿ-ಕೆಬಿಎನ್ (A Fly By wire Premier 1A aircraft VT-KBN) ನ ಏರ್ಟರ್ನ್ಬ್ಯಾಕ್ನಲ್ಲಿ ದೋಷ ಕಾಣಿಸಿಕೊಂಡು ಎಚ್ಎಎಲ್ನಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಈ ವಿಮಾನವು ಎಚ್ಎಎಲ್ನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಇಬ್ಬರು ಪೈಲಟ್‌ಗಳಿದ್ದರು ಮತ್ತು ಯಾವುದೇ ಪ್ರಯಾಣಿಕರು ವಿಮಾನದಲ್ಲಿ ಇರಲಿಲ್ಲ. ಸುರಕ್ಷಿತವಾಗಿ ಟೇಕ್-ಆಫ್ ಮಾಡಲಾಗಿದೆ" ಎಂದು ತಿಳಿಸಿದೆ.
ಇದನ್ನೂ ಓದಿ :ಬೆಳಗಾವಿ ಹೊರವಲಯದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ