ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೊದಲ ಹಂತದ ಚುನಾವಣೆಗೆ ಒಂದೇ ದಿನ ಬಾಕಿ ಉಳಿದಿದೆ. ಮಂಗಳವಾರ ಸಂಜೆಯಿಂದ ಗುರುವಾರ ರಾತ್ರಿವರೆಗೂ ಮದ್ಯದಂಗಡಿಗಳು ಮುಚ್ಚಲ್ಪಟ್ಟಿವೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಸುಮಾರು 110 ಕೋಟಿ ರೂ. ನಷ್ಟವಾಗಲಿದೆ.
ಮುಕ್ತ ಹಾಗೂ ನ್ಯಾಯಸಮ್ಮತದಿಂದ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಚುನಾವಣೆಗೆ 48 ಗಂಟೆಗಳ ಮುನ್ನ ಅಬಕಾರಿ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿರುವ ಎಲ್ಲಾ ಬಾರ್ಗಳು ತೆರೆಯಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿನ್ನಲೆ ಮಂಗಳವಾರ ಸಂಜೆಯಿಂದಲೇ ಬೆಂಗಳೂರು ಸೇರಿದಂತೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿನ ಎಲ್ಲಾ ಬಾರ್, ವೈನ್ ಶಾಪ್ಗಳು ಮುಚ್ಚಿವೆ. ಇದರಿಂದ ಬಿಯರ್ ಹಾಗೂ ಮದ್ಯ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಸುಮಾರು 110 ಕೋಟಿ ರೂ. ಬೊಕ್ಕಸಕ್ಕೆ ಕತ್ತರಿ ಬೀಳಲಿದೆ ಎಂದು ಅಂದಾಜಿಸಲಾಗಿದೆ.