ಕರ್ನಾಟಕ

karnataka

ETV Bharat / state

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಿದ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್​ - ಆಲ್ ಇಂಡಿಯಾ ಲಾಯರ್ಸ್ ಯೂನಿಯನ್​ ಪ್ರತಿಭಟನೆ

ರಾಜ್ಯಾದ್ಯಂತ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜಕೀಯ ನಾಯಕರು, ಪಕ್ಷಗಳು ಸೇರಿದಂತೆ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದ್ದು ಇಂದು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್​ ಸದಸ್ಯರು ಪ್ರತಿಭಟನೆ ನಡೆಸಿದರು.

All India Lawyers Union protest
ಆಲ್ ಇಂಡಿಯಾ ಲಾಯರ್ಸ್ ಯೂನಿಯನ್​

By

Published : Dec 19, 2019, 9:09 PM IST

ಬೆಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್​ ಸದಸ್ಯರು ಸಿಟಿ ಸಿವಿಲ್ ಕೋರ್ಟ್ ಮುಂದೆ ಪ್ರತಿಭಟನೆ ನಡೆಸಿದರು‌.

ಆಲ್ ಇಂಡಿಯಾ ಲಾಯರ್ಸ್ ಯೂನಿಯನ್​ ಸದಸ್ಯರ ಪ್ರತಿಭಟನೆ

ಸಿಟಿ ಸಿವಿಲ್ ಕೋರ್ಟ್ ಮುಂದೆ ಜಮಾಹಿಸಿದ್ದ ವಕೀಲರು ಜಮಾಹಿಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಆಲ್ ಇಂಡಿಯಾ‌ ಯೂನಿಯನ್ ಅಧ್ಯಕ್ಷ ಶಂಕರಪ್ಪ ಮಾತನಾಡಿ, ಸಂವಿಧಾನ ನಮ್ಮ ತಾಯಿ. ಆದರೆ ತಾಯಿಗೆ ಮೋಸ ಮಾಡುವ ಕಾನೂನು ಜಾರಿಗೆ ತಂದಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಒಪ್ಪೋದಿಲ್ಲ. ಮಾನವ ಹಕ್ಕು ತಡೆ ಹಿಡಿಯಲು144 ಸೆಕ್ಷನ್ ಜಾರಿ ಮಾಡಿದ್ದು, ಈ ಕಾಯ್ದೆಯನ್ನು ಜಾರಿ ಮಾಡುವ ಅಗತ್ಯವೇ ಇರಲಿಲ್ಲ ಎಂದಿದ್ದಾರೆ. ಕೇವಲ 8 % ಮಾತ್ರ ಮೂಲ ನಿವಾಸಿಗರು ಮಿಕ್ಕವರು ವಲಸಿಗರೇ. ಮೂಲ ಭಾರತೀಯರಾದ ಆದಿವಾಸಿಗಳಿಗೆ ಪೌರತ್ವವೇ ಗೊತ್ತಿಲ್ಲ. ಅವರು ಪಾಡೇನು ಎಂದು ಪ್ರಶ್ನಿಸಿದರು.

ಬಳಿಕ ವಕೀಲ ಸ್ವಾಮಿ ಮಾತನಾಡಿ, ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದರು.

For All Latest Updates

TAGGED:

ABOUT THE AUTHOR

...view details