ಬೆಂಗಳೂರು: ಕೆ.ಆರ್. ಪುರ ಎಸ್.ಇ.ಎ ಶೈಕ್ಷಣಿಕ ಸಂಸ್ಥೆಯಲ್ಲಿ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಕಾರಿ ಪರಿಷತ್ತಿನ ಸಭೆಯಲ್ಲಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್ಗಳನ್ನು ಅಳವಡಿಸಿ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಯಾದವ ಮಹಾಸಭಾ ಕಾರ್ಯಕ್ರಮದಲ್ಲಿ ಫ್ಲೆಕ್ಸ್ಗಳ ಹಾವಳಿ: ಮೌನಕ್ಕೆ ಶರಣಾದ ಬಿಬಿಎಂಪಿ ಅಧಿಕಾರಿಗಳು - ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್
ನಗರದ ಕೆ.ಆರ್. ಪುರ ಎಸ್.ಇ.ಎ ಶೈಕ್ಷಣಿಕ ಸಂಸ್ಥೆಯಲ್ಲಿ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್ಗಳು ರಾರಾಜಿಸುತ್ತಿದ್ದವು.
![ಯಾದವ ಮಹಾಸಭಾ ಕಾರ್ಯಕ್ರಮದಲ್ಲಿ ಫ್ಲೆಕ್ಸ್ಗಳ ಹಾವಳಿ: ಮೌನಕ್ಕೆ ಶರಣಾದ ಬಿಬಿಎಂಪಿ ಅಧಿಕಾರಿಗಳು](https://etvbharatimages.akamaized.net/etvbharat/prod-images/768-512-5024411-thumbnail-3x2-chai.jpg)
ಪ್ಲೆಕ್ಸ್
ಕಾರ್ಯಕ್ರಮದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಬ್ಯಾನರ್ಗಳ ಅಳವಡಿಕೆ ನಿಷೇಧವಿದ್ದರೂ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಎಸ್.ಇ.ಎ ಶೈಕ್ಷಣಿಕ ಸಂಸ್ಥೆಯಲ್ಲಿ ಆಯೋಜಿಸಿದ್ದ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬ್ಯಾನರ್ಗಳು ರಾರಾಜಿಸುತ್ತಿದ್ದವು.
ಶಾಸಕರೇ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ಅನಧಿಕೃತವಾಗಿ ಫ್ಲೆಕ್ಸ್ಗಳನ್ನು ಹಾಕಿರುವುದರಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇನ್ನು, ಬಿಬಿಎಂಪಿ ಅಧಿಕಾರಿಗಳು ಫ್ಲೆಕ್ಸ್ಗಳನ್ನ ಕಂಡರೂ ಕಾಣದಂತೆ ಜಾಣ ಕುರುಡುತನ ಪ್ರದರ್ಶಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.