ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ: ಇಂದಿನಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಣೆ - ನಾಳೆಯಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ

ರಾಜ್ಯದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಂಗಳವಾರದಿಂದ ಮುಂದಿನ ಆದೇಶವರೆಗೆ ರಜೆ ಘೋಷಿಸಲಾಗಿದೆ.

All primary schools in Bengaluru to remain closed from tomorrow,ನಾಳೆಯಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ
ನಾಳೆಯಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ

By

Published : Mar 9, 2020, 8:44 PM IST

Updated : Mar 10, 2020, 3:19 AM IST

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳವಾರದಿಂದ ಬೆಂಗಳೂರು ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಆರೋಗ್ಯ- ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ‌ ಈ ಕ್ರಮಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುರೇಶ್ ಕುಮಾರ್, ಸಚಿವ

ಈಗಾಗಲೇ ಸೋಮವಾರದಿಂದಲೇ ಫ್ರೀ ಕೆಜಿ, ಯುಕೆಜಿ, ಎಲ್​ಕೆಜಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಮುಂದುವರೆದ ಭಾಗವಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೂ ರಜೆ ಘೋಷಿಸಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, 27ರಿಂದ ಎಸ್​​ಎಸ್​ಎಲ್​ಸಿ ಪರೀಕ್ಷೆಯು ನಡೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ರೀತಿ ತುರ್ತು ರಜೆ ಘೋಷಣೆ ಮಾಡಿರುವುದರಿಂದ ಪೋಷಕರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದ್ದಾರೆ.‌ ಮಕ್ಕಳ ಹಿತವನ್ನ ಗಮನದಲ್ಲಿಟ್ಟುಕೊಂಡು, ಮಕ್ಕಳ ದೇಹವು ಸೂಕ್ಷ್ಮವಾಗಿ ಇರುವುದರಿಂದ ಅನಾರೋಗ್ಯ ಸಮಸ್ಯೆಗಳು ಬೇಗ ಹರಡಲಿದೆ. ಹೀಗಾಗಿ, ಮಂಗಳವಾರದಿಂದ ರಜೆ ಘೋಷಣೆ ಮಾಡಲಾಗಿದೆ. ಪೋಷಕರು, ಮಕ್ಕಳ ಸ್ವಚ್ಛತೆಗೆ ಗಮನ ನೀಡುವಂತೆ ಸಚಿವರು ಹೇಳಿದ್ದಾರೆ. ದಿನಕ್ಕೆ 3-4 ಬಾರಿ ಕೈ ತೊಳೆಯುವಂತೆ ಸೂಚಿಸಿದ್ದಾರೆ. ಕೆಮ್ಮು, ಜ್ವರ, ಉಸಿರಾಟದ ತೊಂದರೆ ಇದ್ದರೆ ಆಸ್ಪತ್ರೆಗೆ ಹೋಗುವಂತೆ ಸಲಹೆ ನೀಡಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

ಇತ್ತ ಅಂಗನವಾಡಿ ಕೇಂದ್ರದ ಮಕ್ಕಳಿಗೆ ರಕ್ಷಣೆ ನೀಡುವ ಉದ್ದೇಶದಿಂದ 7 ದಿನಗಳ ಕಾಲ ರಜೆ ನೀಡಲಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಒಳಪಡುವ ಅಂಗನವಾಡಿ ಕೇಂದ್ರಗಳಿಗೆ ಮಾ.10 ರಿಂದ ಮಾ.17ರ ವರೆಗೆ ರಜೆ ನೀಡುವಂತೆ ಆದೇಶಿಸಿದೆ.

Last Updated : Mar 10, 2020, 3:19 AM IST

ABOUT THE AUTHOR

...view details