ಕರ್ನಾಟಕ

karnataka

ETV Bharat / state

ಶಶಿಕಲಾಗೆ ವಿಶೇಷ ಸೌಲಭ್ಯ ನೀಡಿದ್ದ ಆರೋಪ: ಕೃಷ್ಣ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ್ದ ಕ್ರಮಕ್ಕೆ ಹೈಕೋರ್ಟ್ ತಡೆ - ಅರ್ಜಿದಾರ ಪರವಾದ ಮಂಡಿಸಿದ ಹಿರಿಯ ವಕೀಲ ಎ ಎಸ್ ಪೊನ್ನಣ್ಣ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ವಿ ಕೆ ಶಿಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಿದ ಆರೋಪ - ಬೆಳಗಾವಿ ಕಾರಾಗೃಹ ಮುಖ್ಯ ಅಧೀಕ್ಷಕ ಕೃಷ್ಣ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ

highcourt
ಹೈಕೋರ್ಟ್​

By

Published : May 19, 2023, 10:47 PM IST

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುವ ಸಂದರ್ಭದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಆಗಿದ್ದ ವಿ.ಕೆ. ಶಿಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಿದ ಆರೋಪದ ಸಂಬಂಧ ಬೆಳಗಾವಿ ಕಾರಾಗೃಹ ಮುಖ್ಯ ಅಧೀಕ್ಷಕ ಕೃಷ್ಣ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಿದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಕೃಷ್ಣಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್ ಟಿ ನರೇಂದ್ರ ಪ್ರಸಾದ್ ಅವರಿದ್ದ ನ್ಯಾಯಪೀಠ, ಅರ್ಜಿ ಕುರಿತಾಗಿ ಮಂದಿನ ವಿಚಾರಣೆ ಮಾಡುವಂತೆ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೆ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ (ಬಂಧೀಖಾನೆ) ಅಧೀನ ಕಾರ್ಯದರ್ಶಿ, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಹೆಚ್ಚುವರಿ ಮಹಾ ನಿರ್ದೇಶಕ ಮತ್ತು ಅಧೀಕ್ಷಕರಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆಯೂ ನಿರ್ದೇಶನ ನೀಡಿದೆ

ಇದನ್ನು ಓದಿ: 20 ರೂ ನೋಟು ತೋರಿಸಿದರೆ ಎರಡು ಸಾವಿರದ ಗರಿಗರಿ ನೋಟು ಆರೋಪ : ಪಕ್ಷೇತರ ಅಭ್ಯರ್ಥಿ ವಿರುದ್ಧ ಎಫ್ಐಆರ್

ಅರ್ಜಿದಾರ ಪರವಾದ ಮಂಡಿಸಿದ ಹಿರಿಯ ವಕೀಲ ಎ ಎಸ್ ಪೊನ್ನಣ್ಣ, ಶಶಿಕಲಾಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ನಿವೃತ್ತ ಕಾರಾಗೃಹ ಡಿಜಿಪಿ ಎಚ್.ಎನ್. ಸತ್ಯಾನಾರಾಯಣ ರಾವ್ ಅವರು ಎರಡು ಕೋಟಿ ಹಣ ಪಡೆದಿರುವ ಆರೋಪವಿದೆ ಎಂಬ ವಿಚಾರವನ್ನು ಕೋರ್ಟ್​ ಗಮನಕ್ಕೆ ತಂದರು. ಪ್ರಕರಣದ ಕುರಿತು ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿನಯ್ ಕುಮಾರ್ ವಿಚಾರಣೆ ನಡೆಸಿ ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರವು 2018ರ ಫೆ.26ರಂದು ಒಪ್ಪಿಕೊಂಡಿದೆ. ಆ ವರದಿಯಲ್ಲಿ ಅರ್ಜಿದಾರರ ವಿರುದ್ಧದ ಯಾವುದೇ ಆರೋಪವಿಲ್ಲ ಎಂದು ನ್ಯಾಯಪೀಠಕ್ಕೆ ವರದಿಯಲ್ಲಿನ ಅಂಶಗಳನ್ನು ವಿವರಿಸಿದರು.

ಅಲ್ಲದೇ, ವಿನಯ್ ಕುಮಾರ್ ವರದಿ ಪರಿಗಣಿಸಿ ತನಿಖೆ ನಡೆಸುವಂತೆ ಸರ್ಕಾರ ಎಸಿಬಿಗೆ ನಿರ್ದೇಶಿಸಿತ್ತು. ಎಸಿಬಿಯ ತನಿಖೆ ನಡೆಸಿ ಅರ್ಜಿದಾರರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದು, ಪ್ರಾಸಿಕ್ಯೂಷನ್‌ಗೆ ನಡೆಸಲು ಸರ್ಕಾರ ಅನುಮತಿ ನೀಡಿದೆ. ಯಾವುದೇ ನಿರ್ದಿಷ್ಟ ಆರೋಪ ಇಲ್ಲದ ಸಂದರ್ಭದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿದೆ ಎಂದು ಪೊನ್ನಣ್ಣ ನ್ಯಾಯಪೀಠದ ಎದುರು ಪ್ರತಿಪಾದಿಸಿದರು.

ಮನವಿ: ಪ್ರಕರಣದ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಎಸಿಬಿಗೆ ಅನುಮತಿ ನೀಡಿ ರಾಜ್ಯ ಸರ್ಕಾರ ೨೦೨೧ರ ಡಿ.೩೧ರಂದು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಕೃಷ್ಣ ಕುಮಾರ್ ಅರ್ಜಿಯಲ್ಲಿ ಕೋರಿದ್ದರು. ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ವಕಾಲತ್ತು ವಹಿಸಿ ತಮ್ಮ ವಾದ ಮಂಡನೆ ಮಾಡಿದರು.

ಇದನ್ನೂಓದಿ:ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ: ಅಭಯ್​ ಕುಮಾರ್​ ಪಾಟೀಲ್​ ವಿರುದ್ಧ ದೂರು ರದ್ದುಪಡಿಸಿದ ಹೈಕೋರ್ಟ್

ABOUT THE AUTHOR

...view details