ಕರ್ನಾಟಕ

karnataka

ETV Bharat / state

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: 6 ಮಂದಿ ವಶಕ್ಕೆ - ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಕನ್ನಡಪರ ಸಂಘಟನೆಯ ಆರು ಜನರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ

By

Published : Aug 19, 2019, 8:06 AM IST

ಬೆಂಗಳೂರು:ಕಾರ್ಯಕ್ರಮವೊಂದರ ವೇಳೆ ನಡೆದ ಗಲಾಟೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಕನ್ನಡಪರ ಸಂಘಟನೆಯ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಚಾತುರ್ಮಾಸ್ಯ ಕಾರ್ಯಕ್ರಮ ನಡೆಯುತ್ತಿತ್ತು. ಆ ವೇಳೆ ಅಲ್ಲಿ ಹಿಂದಿ ಭಾಷೆಯಲ್ಲಿದ್ದ ನಾಮಫಲಕದಲ್ಲಿ ಸ್ವಾಮೀಜಿ ಇರುವ ಭಾವಚಿತ್ರ ಹಾಕಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಆಗ ಕನ್ನಡ ಭಾಷೆಯಲ್ಲೇ ನಾಮಫಲಕ ಹಾಕಬೇಕೆಂದು ವಾದ-ವಾಗ್ವಾದ ನಡೆದು ಗಲಾಟೆಯಾಗಿತ್ತು. ಆ ವೇಳೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಅಲ್ಲಿ ಹಾಕಿದ್ದ ನಾಮಫಲಕ ಕಿತ್ತುಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.

ತಮ್ಮ ಸ್ವಾಮೀಜಿಗಳ ಭಾವಚಿತ್ರ ತುಳಿದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಲ್ಲದೇ ಅವಮಾನ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಯೋಜಕರು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಹಿನ್ನೆಲೆಯಲ್ಲಿ ಪೊಲೀಸರು ಕನ್ನಡ ಪರ ಸಂಘಟನೆಯ ಆರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ABOUT THE AUTHOR

...view details