ಬೆಂಗಳೂರು: ಅಶ್ಲೀಲ ಚಿತ್ರಗಳಿಗೆ ಮಕ್ಕಳನ್ನು ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳದ ಪೊಲೀಸ್ ಇಲಾಖೆ ಹಾಗೂ ಯಾವುದೇ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ರಾಜ್ಯದ 113 ಮಕ್ಕಳು ಅಶ್ಲೀಲ ಚಿತ್ರಗಳಲ್ಲಿ ಬಳಕೆ: ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ - Alleged use of child pornography
ರಾಜ್ಯದಲ್ಲಿ ಅಶ್ಲೀಲ ಚಿತ್ರಗಳಿಗೆ ಮಕ್ಕಳನ್ನ ಬಳಕೆ ಮಾಡಿಕೊಂಡಿರುವ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದರೂ, ರಾಜ್ಯ ಸರ್ಕಾರ ಈ ಸಂಬಂಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದಕ್ಕೆ ಹೈಕೋರ್ಟ್ ತೀವ್ರ ಅಸಮಧಾನ ವ್ಯಕ್ತಪಡಿಸಿದೆ.
ಮಕ್ಕಳ ಕಾಳಜಿ ಹಾಗೂ ಸುರಕ್ಷತೆ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಹಾಗೂ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ, ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಮಕ್ಕಳನ್ನ ಅಶ್ಲೀಲ ಚಿತ್ರಗಳಲ್ಲಿ ತೋರಿಸುವವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳದ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಮೇಲೆ ಅಸಮಾಧಾನ ವ್ಯಕ್ತಪಡಿಸಿತು. ಕೇಂದ್ರ ಸರ್ಕಾರವೇ ಕರ್ನಾಟಕದಲ್ಲಿ 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ವರದಿ ನೀಡಿದೆ. ಆದರೆ, ಇಲ್ಲಿಯವರೆಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಮುಂದಿನ ವಿಚಾರಣೆ ವೇಳೆ ಕೈಗೊಂಡ ಕ್ರಮದ ವರದಿ ನೀಡುವಂತೆ ಹೇಳಿ ವಿಚಾರಣೆ ಮುಂದೂಡಲಾಯ್ತು.