ಬೆಂಗಳೂರು: ಅಲಾಯನ್ಸ್ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣದ ಆರೋಪಿ ಮೇಲೆ ಉತ್ತರ ವಿಭಾಗ ಪೊಲೀಸರು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದಾರೆ. ಗಣೇಶ್ ಪೊಲೀಸರ ಗುಂಡಿನ ದಾಳಿಗೆ ಒಳಗಾದ ಆರೋಪಿ.
ಅಲಾಯನ್ಸ್ ವಿವಿ ಮಾಜಿ ಕುಲಪತಿ ಕೊಲೆ ಪ್ರಕರಣ: ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು - ಬೆಂಗಳೂರಿನಲ್ಲಿ ಪೊಲೀಸರಿಂದ ಶೂಟೌಟ್
ಅಲಾಯನ್ಸ್ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ಹಿಂದೆ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಗಣೇಶ್ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೀಡ್ಸ್ ಕಾರ್ಪೋರೇಷನ್ ಗೋಡೌನ್ ಬಳಿ ಇರುವ ಸೂಕ್ತ ಮಾಹಿತಿ ಮೇರೆಗೆ ಉತ್ತರ ವಿಭಾಗದ ಆರ್.ಟಿ ನಗರ ಪೊಲೀಸರು ತೆರಳಿದಾಗ ಆರೋಪಿ ಗಣೇಶ್ ಪ್ರೊಬೇಷನರಿ ಪಿಎಸ್ಐ ಎಲ್ಲವ್ವ ಹಾಗೂ ಪೇದೆ ಮಲ್ಲಿಕಾರ್ಜುನ್ ಮೇಲೆ ಹಲ್ಲೆ ಮಾಡಿದ್ದಾನೆ.
ತಕ್ಷಣ ಆರ್.ಟಿ ನಗರ ಪೊಲೀಸ್ ಇನ್ಸ್ಪೆಕ್ಟರ್ ಮಿಥುನ್ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಸುತ್ತು ಗಾಳಿಯಲ್ಲಿ ಮತ್ತೊಂದು ಸುತ್ತು ಗಣೇಶ್ ಎಡಗಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ ಸದ್ಯ ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಸೂಚನೆಯಂತೆ ಸೂರಜ್ ಗಣೇಶ್ ಜೊತೆ ಸೇರಿಕೊಂಡು ಅಯ್ಯಪ್ಯ ಅವರನ್ನ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನ ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ.