ಬೆಂಗಳೂರು: ಈ ಬಾರಿ ವಿಧಾನಸಭೆ ಕಲಾಪ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಸಾರ್ವಜನಿಕರಿಗೆ ವಿಧಾನಸಭೆ ಕಲಾಪ ವೀಕ್ಷಣೆಗೆ ಅನುವು ಮಾಡಿಕೊಡಲಾಗುವುದು ಎಂದರು.
ಕೊರೊನಾ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸಬೇಕಿದೆ. ಹೀಗಾಗಿ ಅನಾರೋಗ್ಯ ಪೀಡಿತರು ಸದನಕ್ಕೆ ಬರುವುದು ಬೇಡ. ಅಧಿಕಾರಿಗಳು, ಪಿಎ, ಪಿಎಸ್ಗಳಿಗೆ ಈ ಹಿಂದಿನಂತೆ ವ್ಯವಸ್ಥೆ ಮಾಡಲಾಗುತ್ತದೆ.
ದೈಹಿಕ ಅಂತರ ಕಾಯ್ದುಕೊಂಡು ಪತ್ರಕರ್ತರಿಗೆ ಸಭಾಂಗಣದಲ್ಲಿ ಆಸನ ವ್ಯವಸ್ಥೆ ಕಲ್ಪಿಸಲು ನನ್ನ ಸಹಮತವಿದೆ. ವಾರ್ತಾ ಇಲಾಖೆ ಅಧಿಕಾರಿಗಳ ಜೊತೆ ನಾವು ಚರ್ಚೆ ಮಾಡುತ್ತೇವೆ. ಎಲ್ಲವನ್ನೂ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.