ಕರ್ನಾಟಕ

karnataka

ETV Bharat / state

ಅಗತ್ಯ ವಸ್ತುಗಳ ಸರಬರಾಜು ಉಸ್ತುವಾರಿ ನೋಡಿಕೊಳ್ಳಲು ಅಲೋಕ್ ಕುಮಾರ್ ನೇಮ‌ಕ

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ​ನ್ನು ಅಗತ್ಯ ವಸ್ತುಗಳ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ನೇಮಕ ಮಾಡಲಾಗಿದೆ.

alok kumar
ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್

By

Published : Mar 28, 2020, 5:02 PM IST

ಬೆಂಗಳೂರು: ಅಗತ್ಯ ವಸ್ತುಗಳ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಭೀತಿಯಿಂದ ದೇಶವ್ಯಾಪಿ ಲಾಕ್​​ಡೌನ್ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳು ತಲುಪುವಂತಾಗಬೇಕು. ದಿನಸಿ ಪದಾರ್ಥಗಳು, ಹಣ್ಣು, ತರಕಾರಿ, ಗ್ಯಾಸ್ ಹಾಗೂ ಮೆಡಿಸಿನ್ ಪೂರೈಕೆಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು. ಹಾಗೆಯೇ ಬೆಂಗಳೂರು ಸೇರಿದಂತೆ ಇಡೀ ರಾಜ್ಯಕ್ಕೆ ಸಮರ್ಪಕವಾಗಿ ಅಗತ್ಯ ವಸ್ತುಗಳು ತಲುಪುವಂತೆ ಉಸ್ತುವಾರಿ ನೋಡಿಕೊಳ್ಳುವ ಜವಾಬ್ದಾರಿಯನ್ನು ಸರ್ಕಾರ ಕೆಎಸ್.ಆರ್.ಪಿ. ಎಡಿಜಿಪಿ‌ ಅಲೋಕ್ ಕುಮಾರ್​​ಗೆ ನೀಡಿದೆ.

ಇನ್ನು ಹೊರ ರಾಜ್ಯಗಳಿಂದ ಬರುವ ಅಗತ್ಯ ವಸ್ತುಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು‌ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ನೀಡುವಂತೆ ಅಲೋಕ್ ಕುಮಾರ್​ಗೆ ಸರ್ಕಾರದಿಂದ ಸೂಚನೆ ನೀಡಲಾಗಿದೆ.

ABOUT THE AUTHOR

...view details