ಬೆಂಗಳೂರು: ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸೋಮವಾರ ಹಾಗೂ ಮಂಗಳವಾರ ಅಧಿವೇಶನ ನಡೆಯುವುದರಿಂದ ಯಾವುದೇ ಸಂಘಟನೆ ಮುಖಂಡರು ಪ್ರತಿಭಟನೆ ಮುಂದಾಗಬಾರದು ಅದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಆದೇಶಿಸಿದ್ದಾರೆ.
ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ: ಅಲೋಕ್ ಕುಮಾರ್ ಆದೇಶ - bangalore latest news
ಎರಡು ದಿನ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು. 2 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಪ್ರತಿಭಟನೆ, ಧರಣಿ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್
ಕಲಾಪದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ವಿಧಾನಸೌಧದ ಬಳಿ ಪ್ರತಿಭಟನೆ ಅಥವಾ ಬೇಡಿಕೆ ಮಂಡನೆ ಮಾಡುವ ಸಾಧ್ಯತೆಗಳಿವೆ. ಸುಗಮ ಕಲಾಪ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಂಗಳವಾರ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ತಿಳಿಸಿದರು.