ಕರ್ನಾಟಕ

karnataka

ETV Bharat / state

ಸಾರಿಗೆ ಮುಷ್ಕರ ಹಿನ್ನೆಲೆ ಪರ್ಯಾಯ ವ್ಯವಸ್ಥೆ: ಮಾಹಿತಿ ನೀಡಿದ ಸಾರಿಗೆ ಇಲಾಖೆ ಅಪರ ಆಯುಕ್ತ - ಸಾರಿಗೆ ಮುಷ್ಕರ

ಮುಷ್ಕರದ ವೇಳೆ ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಖಾಸಗಿ ಬಸ್ ಓಡಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಿನಿ ಬಸ್, ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್​​ಗಳ ಓಡಾಟಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.

transport
transport

By

Published : Apr 6, 2021, 5:22 PM IST

ಬೆಂಗಳೂರು:ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ಸಾರಿಗೆ ಇಲಾಖೆಯಿಂದ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸಾರಿಗೆ ಇಲಾಖೆ ಅಪರ ಆಯುಕ್ತ ನರೇಂದ್ರ ಹೋಳ್ಕರ್ ಈ ಪರ್ಯಾಯ ವ್ಯವಸ್ಥೆ ಮಾಹಿತಿ ನೀಡಿದ್ದಾರೆ.

ಮುಷ್ಕರದ ವೇಳೆ ಪ್ರಯಾಣಿಕರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಬಸ್ ಓಡಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಿನಿ ಬಸ್, ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್​​ಗಳ ಓಡಾಟಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾತ್ಕಾಲಿಕ ಪರ್ಮಿಟ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹಲವು ಬಸ್ ಮಾಲೀಕರು ಪರ್ಮಿಟ್ ಪಡೆದು ಬಸ್ ಓಡಿಸಲು ಅನುಮತಿ ಸೂಚಿಸಿದ್ದಾರೆ ಎಂದರು.

ಸರ್ಕಾರಿ ಬಸ್​ಗಳು ಎಲ್ಲೆಲ್ಲಿ ಓಡಾಡ್ತವೋ ಅಲ್ಲೆಲ್ಲಾ ಖಾಸಗಿ ಬಸ್​ಗಳನ್ನು ಓಡಿಸುತ್ತೇವೆ. ಖಾಸಗಿ ಬಸ್ ಓಡಿಸಿದ್ರೂ ಬಸ್ ದರ ಮಾತ್ರ ಹೆಚ್ಚಳ ಮಾಡುವಂತಿಲ್ಲ. ಪ್ರಯಾಣಿಕರಿಂದ ಹೆಚ್ಚಿನ ದರ ಪಡೆಯಬಾರದು ಎಂದು ಸೂಚಿಸಲಾಗಿದೆ. ಪ್ರಯಾಣಿಕರಿಗೆ ಆರ್ಥಿಕ ಹೊರೆ ಆಗದಂತೆ ದರ ನಿಗದಿ ಮಾಡಲಾಗಿದೆ.‌ ಹೆಚ್ಚಿನ ದರ ವಸೂಲಿ ಕುರಿತಂತೆ ದೂರು ಬಂದರೆ ಕೂಡಲೇ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ಕೂಡ ನೀಡಲಾಗಿದೆ ಎಂದು ಹೇಳಿದರು.

ABOUT THE AUTHOR

...view details