ಬೆಂಗಳೂರು: ಲಾಕ್ಡೌನ್ ಹಿನ್ನೆಲೆ ರೈತರು ಬೆಳೆದ ಹಣ್ಣು, ತರಕಾರಿ ಮಾರಾಟಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಇಲ್ಲಿನ ಪಾಲಿಕೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದ ಅಪಾರ್ಟ್ಮೆಂಟ್ಗಳಿಗೆ ಹಾಪ್ ಕಾಮ್ಸ್ನಿಂದ ಹಾಗೂ ಎಲ್ಲಾ ವಾರ್ಡ್ಗಳ ನಂದಿನಿ ಬೂತ್ಗಳಲ್ಲಿ ಹಣ್ಣು, ತರಕಾರಿ ಮಾರಾಟಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಇದರಿಂದ ರೈತರಿಗೆ ಉತ್ತಮ ಬೆಲೆ ಸಿಗುತ್ತದೆ. ಇನ್ನೊಂದೆಡೆ ಗ್ರಾಹಕರಿಗೂ ಸುಲಭವಾಗಿ ಅಗತ್ಯ ವಸ್ತುಗಳು ಸಿಗುತ್ತವೆ. ಶುದ್ಧ ಕುಡಿಯುವ ನೀರನ್ನು ಉಚಿತವಾಗಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.
ತಳ್ಳುವ ಗಾಡಿಗಳಲ್ಲಿಯೂ ಹಣ್ಣು, ತರಕಾರಿ ಮಾರಾಟಕ್ಕೆ ನಿಗದಿತ ಸ್ಥಳದಲ್ಲಿ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತೋಟಗಾರಿಕೆ ಸಚಿವ ಕೆ.ಸಿ.ನಾರಾಯಣಗೌಡ, ಕೃಷಿ ಸಚಿವ ಬಿ.ಸಿ.ಪಾಟೀಲ್ ಇದ್ದರು.