ಬೆಂಗಳೂರು: ರಾಜ್ಯದ ನಾಯಕರು, ಶಾಸಕರು, ಸಂಸದರು ಹಾಗೂ ಎಲ್ಲಾ ಕಾರ್ಯಕರ್ತರು ತಮ್ಮ ತಮ್ಮ ಮನೆಗಳಲ್ಲಿಯೇ ನಾಳೆ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮತ್ತು ಪುಷ್ಪಾಂಜಲಿ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 129ನೇ ಜಯಂತಿಯನ್ನು ಏಪ್ರಿಲ್ 14ರಂದು ಆಚರಿಸಲಾಗುತ್ತದೆ. ಆದರೆ ಕೊರೊನಾ ವೈರಸ್ ಕಾರಣದಿಂದ ಸಾರ್ವಜನಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಸರಳವಾಗಿ ತಮ್ಮ ತಮ್ಮ ಮನೆಗಳಲ್ಲೇ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಸಲಹೆ ನೀಡಿದ್ದಾರೆ.
ಕೇವಲ ಪುಷ್ಪಾರ್ಪಣೆ ಮಾಡಿದರೆ ಸಾಲುವುದಿಲ್ಲ, ಅಂಬೇಡ್ಕರ್ ಅವರ ಬಗ್ಗೆ ತಿಳಿಯುವ ಪ್ರಯತ್ನ ನಡೆಸಬೇಕು. ಜೊತೆಗೆ ಸಾಮಾಜಿಕ ಕಳಕಳಿಯನ್ನೂ ಮೆರೆಯಬೇಕು ಎಂದು ಸೂಚನೆ ನೀಡಿರುವ ಕಟೀಲ್, ನಾಳೆ ಕಾರ್ಯಕರ್ತರು ಮಾಡಬೇಕಿರುವ ಜವಾಬ್ದಾರಿಯನ್ನು ತಿಳಿಸಿದ್ದಾರೆ.
ಅಂಬೇಡ್ಕರ್ ಜಯಂತಿ ಆಚರಣೆ ಹೇಗೆ