ಬೆಂಗಳೂರು: ಡಾ. ಬಿ. ಆರ್ ಅಂಬೇಡ್ಕರ್ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜು ಟ್ರಸ್ಟಿ, ಹೆಸರಾಂತ ವೈದ್ಯ ಶಿವಲಿಂಗಯ್ಯ (92) ಅವರಿಗೆ ವಿಷ ಪ್ರಾಶನ ಮಾಡಿಸಿ ಕೊಲೆಗೆ ಪ್ರಯತ್ನಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆಯ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಶಿವಲಿಂಗಯ್ಯ ಪುತ್ರ ಡಾ. ರವಿಪ್ರಕಾಶ್ ಈ ಕುರಿತು ಠಾಣೆಗೆ ದೂರು ನೀಡಿದ ನಂತರ ಪೊಲೀಸರು ತನಿಖೆ ಕೈಗೊಂಡು ಹಲವು ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.
ಅಂಬೇಡ್ಕರ್ ವೈದ್ಯಕೀಯ ಕಾಲೇಜು ಸಂಸ್ಥಾಪಕ ಟ್ರಸ್ಟಿ ಕೊಲೆ ಯತ್ನ; ತನಿಖೆ ತೀವ್ರ - Ambedkar Medical College trusty crime
ಶಿವಲಿಂಗಯ್ಯ ವಾಸಿಸುತ್ತಿದ್ದ ಮನೆಗೆ ಭೇಟಿ ನೀಡಿರುವ ಪೊಲೀಸರು ಹಾಗೂ ಎಫ್.ಎಸ್.ಎಲ್ ತಂಡ ಪರಿಶೀಲನೆ ನಡೆಸುತ್ತಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರಿಂದಲೂ ಸಹ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಶಿವಲಿಂಗಯ್ಯ ವಾಸಿಸುತ್ತಿದ್ದ ಮನೆಗೆ ಭೇಟಿ ನೀಡಿರುವ ಪೊಲೀಸರು ಹಾಗೂ ಎಫ್.ಎಸ್.ಎಲ್ ತಂಡ ಪರಿಶೀಲನೆ ನಡೆಸುತ್ತಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರಿಂದಲೂ ಸಹ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆಸ್ತಿ ಕಬಳಿಕೆ ಉದ್ದೇಶದಿಂದ ಶಿವಲಿಂಗಯ್ಯ ಅವರನ್ನು ಆರೈಕೆ ಮಾಡುತ್ತಿದ್ದ ಧನಮಣಿ ಮತ್ತು ಆಪ್ತ ಸಹಾಯಕ ವೆಂಕಟೇಶಮೂರ್ತಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಬಗ್ಗೆ ನಾವು ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದೇವೆ. ತನಿಖೆ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಸಂತೋಷ ಪಾಟೀಲ್ ಆತ್ಮಹತ್ಯೆ: ಸಚಿವ ಆರ್.ಅಶೋಕ್, ಹೆಚ್.ವಿಶ್ವನಾಥ್ ಹೇಳಿದ್ದೇನು?