ಕರ್ನಾಟಕ

karnataka

ETV Bharat / state

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿಳಂಬ: ಸಂಘಟನೆ ಅಧ್ಯಕ್ಷರಿಗೆ ಹೈಕೋರ್ಟ್ ಸಮನ್ಸ್ - ಬೆಂಗಳೂರು ಹೈಕೋರ್ಟ್​ ಸುದ್ದಿ

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿಳಂಬ ಹಿನ್ನೆಲೆ ಸಂಘಟನೆ ಅಧ್ಯಕ್ಷರಿಗೆ ಹೈಕೋರ್ಟ್ ಸಮನ್ಸ್ ನೀಡಿದೆ.

Ambedkar Statue Displacement Delay, High Court summons, summons to Ambedkar Youth Organization President, Bengaluru high court news, Karnataka high court news, ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿಳಂಬ, ಹೈಕೋರ್ಟ್ ಸಮನ್ಸ್, ಅಂಬೇಡ್ಕರ್ ಯುವ ಸಂಘಟನೆ ಅಧ್ಯಕ್ಷಗೆ ಸಮನ್ಸ್​, ಬೆಂಗಳೂರು ಹೈಕೋರ್ಟ್​ ಸುದ್ದಿ, ಕರ್ನಾಟಕ ಹೈಕೋರ್ಟ್​ ಸುದ್ದಿ,
ಸಂಘಟನೆ ಅಧ್ಯಕ್ಷರಿಗೆ ಹೈಕೋರ್ಟ್ ಸಮನ್ಸ್

By

Published : Dec 23, 2021, 6:53 AM IST

ಬೆಂಗಳೂರು : ದಾವಣಗೆರೆ ಜಿಲ್ಲೆಯ ಹಿರೇಮೇಗಲಗೆರೆ ಗ್ರಾಮ ಪಂಚಾಯತ್​ ವ್ಯಾಪ್ತಿಯ ಸಾರ್ವಜನಿಕ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸ್ಥಾಪಿಸಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಳಾಂತರಿಸದ ಅಂಬೇಡ್ಕರ್ ಯುವ ಸಂಘಟನೆ ಅಧ್ಯಕ್ಷ ರೇವಣಸಿದ್ದಪ್ಪಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಹಿರೇಮೇಗಲಗೆರೆ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಮ್‌ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಅಂಬೇಡ್ಕರ ಪ್ರತಿಮೆಯನ್ನು ಸ್ಥಳಾಂತರಿಸುವುದಾಗಿ ಡಾ. ಬಿ.ಆರ್ ಅಂಬೇಡ್ಕರ್ ಸಂಘಟನೆಯ ಅಧ್ಯಕ್ಷ ರೇವಣಸಿದ್ದಪ್ಪ 2021ರ ಆಗಸ್ಟ್ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟು, ನಾಲ್ಕು ತಿಂಗಳಲ್ಲಿ ಪ್ರತಿಮೆ ಸ್ಥಳಾಂತರಿಸುವುದಾಗಿ ತಿಳಿಸಿದ್ದರು. ಆದರೆ, ಇದಕ್ಕೆ ಸಮ್ಮತಿಸಿದ್ದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿತ್ತು. ಆದರೆ, ಭರವಸೆಯಂತೆ ಪ್ರತಿಮ ಸ್ಥಳಾಂತರಿಸದ ಹಿನ್ನೆಲೆ ಸಂಘಟನೆ ಅಧ್ಯಕ್ಷರು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶಿಸಿ, ಸಮನ್ಸ್ ಜಾರಿ ಮಾಡಿದೆ.

ಹಿಂದಿನ ವಿಚಾರಣೆಗಳ ವೇಳೆ ನಿಯಮ ಬಾಹಿರವಾಗಿ ಪುತ್ಥಳಿ ಸ್ಥಾಪಿಸಿದ್ದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಮಹಾನ್ ಮಾನವತಾವಾದಿ, ನ್ಯಾಯಪರಿಪಾಲನೆಯನ್ನು ಅದಮ್ಯವಾಗಿ ನಂಬಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರ್​ರ ಪ್ರತಿಮೆಯನ್ನು ಕಾನೂನು ಬಾಹಿರವಾಗಿ ಸ್ಥಾಪಿಸುವುದು ಅವರಿಗೆ ಮಾಡುವ ಅಪಮಾನ ಎಂದು ಬೇಸರ ವ್ಯಕ್ತಪಡಿಸಿತ್ತು. ಈ ವೇಳೆ ನ್ಯಾಯಾಲಯದ ಕ್ಷಮೆ ಕೋರಿದ್ದ ಸಂಘಟನೆ, ಪುತ್ಥಳಿ ಮರುಸ್ಥಾಪಿಸಲು ಸೂಕ್ತ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ಕೋರಿತ್ತು. ಆದರೆ, ಸ್ಥಳ ನೀಡಲು ಸರ್ಕಾರ ನಿರಾಕರಿಸಿತ್ತು. ನಂತರ, ಪುತ್ಥಳಿ ಸ್ಥಳಾಂತರಿಸುವುದಾಗಿ ಸಂಘದ ಪ್ರತಿನಿಧಿಗಳು ಆಗಸ್ಟ್‌ 9ರಂದು ಮುಚ್ಚಳಿಕೆ ಬರೆದುಕೊಟ್ಟಿದ್ದರು.

ಅರ್ಜಿ ಇತ್ಯರ್ಥಪಡಿಸಿದ್ದ ನ್ಯಾಯಾಲಯ ಡಿಸೆಂಬರ್‌ 17 ರೊಳಗೆ ಪ್ರತಿಮೆ ಸ್ಥಳಾಂತರಿಸಲು, ಅನುಪಾಲನಾ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಹೈಕೋರ್ಟ್ ಆದೇಶ ಪಾಲಿಸದ ಹಿನ್ನೆಲೆ ಸಂಘಟನೆ ಅಧ್ಯಕ್ಷರಿಗೆ ಇದೀಗ ಸಮನ್ಸ್‌ ಜಾರಿ ಮಾಡಲಾಗಿದೆ.

ABOUT THE AUTHOR

...view details