ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಭೋಜನಕೂಟದಲ್ಲಿ ಶಾ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದು, ಬೆಳ್ಳಿ ತಟ್ಟೆಯಲ್ಲಿ ಭೋಜನ ಸೇವಿಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏರ್ಪಡಿಸಿರುವ ಭೋಜನ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒಂದೇ ಟೇಬಲ್‌ನಲ್ಲಿ ಕುಳಿತು ದುಂಡುಮೇಜಿನ ಭೋಜನ ಸೇವಿಸಿದರು. ಈ ವೇಳೆ ಅನೌಪಚಾರಿಕವಾಗಿ ಐವರು ನಾಯಕರು ಮಾತುಕತೆ ನಡೆಸಿದರು.
ಹೋಳಿಗೆ ಊಟ :ಬಸವ ಜಯಂತಿ ಪ್ರಯುಕ್ತ ವಿಶೇಷ ಹೋಳಿಗೆ ಊಟ ಏರ್ಪಾಡು ಮಾಡಲಾಗಿತ್ತು. ಸೌತ್ ಇಂಡಿಯನ್ ಜೊತೆ ನಾರ್ತ್ ಇಂಡಿಯನ್ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು.