ಕರ್ನಾಟಕ

karnataka

By

Published : Mar 26, 2023, 6:43 AM IST

Updated : Mar 26, 2023, 7:04 AM IST

ETV Bharat / state

ಬೆಂಗಳೂರಿಗೆ ಇಂದು ಅಮಿತ್ ಶಾ: ಟ್ರಾಫಿಕ್ ಜಾಮ್ ಸಾಧ್ಯತೆ, ಪರ್ಯಾಯ ಮಾರ್ಗ ಬಳಸಲು ಸೂಚನೆ

ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಸೂಚನೆ ನೀಡಿದ್ದಾರೆ.

central-minister-amit-sha-visits-bengaluru-today
ಇಂದು ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ : ವಾಹನ ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಬಿಸಿ

ಬೆಂಗಳೂರು :ರಾಜ್ಯ ರಾಜಧಾನಿ ಬೆಂಗಳೂರಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಇದರಿಂದಾಗಿ ನಗರದ ಕೆಲವೆಡೆ ಸಂಚಾರ ದಟ್ಟನೆ ಉಂಟಾಗುವ ಸಾಧ್ಯತೆ ಇದೆ. ಸುಗಮ ಸಂಚಾರಕ್ಕೆ ಪರ್ಯಾಯ ರಸ್ತೆ ಮಾರ್ಗಗಳನ್ನು ಬಳಸುವಂತೆ ಸಂಚಾರಿ ಪೊಲೀಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ಎಲ್ಲೆಲ್ಲಿ ಸಂಚಾರ ದಟ್ಟನೆ?: ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನಗರದ ಬಳ್ಳಾರಿ ರಸ್ತೆ, ಹೆಬ್ಬಾಳ ಸರ್ಕಲ್, ಮೇಖ್ರಿ ಸರ್ಕಲ್, ಕಾವೇರಿ ಜಂಕ್ಷನ್, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಕೆ.ಆರ್.ಸರ್ಕಲ್, ಹಡ್ನನ್ ಸರ್ಕಲ್, ಹಳೆ ಏರ್ಪೋರ್ಟ್ ರಸ್ತೆ, ಇಸ್ರೋ ಜಂಕ್ಷನ್, ಸುರಂಜನ್ ದಾಸ್ ರಸ್ತೆ, ಕ್ವೀನ್ಸ್ ರಸ್ತೆ, ಟ್ರಿನಿಟಿ ಸರ್ಕಲ್ ಹಾಗೂ ಟೌನ್‌ಹಾಲ್ ಸುತ್ತಮುತ್ತ ವಾಹನ ದಟ್ಟಣೆ ಉಂಟಾಗಲಿದೆ.

ಅಮಿತ್ ಶಾ ರಾಜ್ಯ ಪ್ರವಾಸ:ಶನಿವಾರ ಸಂಜೆ 5.20ಕ್ಕೆ ಬೀದರ್ ವಾಯುನೆಲೆಗೆ ಆಗಮಿಸಿದ್ದ ಅಮಿತ್ ಶಾ, ವಾಯುಪಡೆ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ 10.30ರಿಂದ 12.30ರವರೆಗೆ ಬೀದರ್​ನ ಗೊರಟ ಮೈದಾನದಲ್ಲಿ 103 ಅಡಿ ಎತ್ತರದ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು, ನಂತರ ಗೊರಟ ಶಾಹೀದ್ ಸ್ಮಾರಕ ಮತ್ತು ಸರ್ಧಾರ್ ವಲ್ಲಭಭಾಯ್ ಪಟೇಲ್ ಸ್ಮಾರಕ ಉದ್ಘಾಟಿಸುವರು.

ಮಧ್ಯಾಹ್ನ 1.45 ರಿಂದ 2.45ರವರೆಗೆ ರಾಯಚೂರಿನ ದೇವದುರ್ಗ ತಾಲ್ಲೂಕಿನ ಗಬ್ಬೂರ್​ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡುವರು. ಇದಾದ ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಬೀದರ್ ವಿಮಾನ ನಿಲ್ದಾಣದಿಂದ ಹೊರಟು 5 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.30 ರಿಂದ 7.30 ರವರೆಗೆ ವಿಧಾನಸೌಧದಲ್ಲಿ 12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರ ಮತ್ತು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಉತ್ಸವ ಸಮ್ಮೇಳನದಲ್ಲೂ ಭಾಗಿಯಾಗಲಿದ್ದಾರೆ.

ಬಿಜೆಪಿ ಕೋರ್​ ಕಮಿಟಿ ಸಭೆ:ರಾತ್ರಿ 8.30 ರಿಂದ 9.30 ರವರೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಶಾ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಉಪಸ್ಥಿತರಿರಲಿದ್ದಾರೆ.

ಸಭೆಯ ಬಳಿಕ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿಯೇ ವಾಸ್ತವ್ಯ ಹೂಡಲಿರುವ ಅಮಿತ್ ಶಾ, ಮಾರ್ಚ್ 27 ರಂದು ಬೆಳಗ್ಗೆ 9 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸುವರು.

ಇದನ್ನೂ ಓದಿ :ಭಾನುವಾರದಿಂದ ಕೆಆರ್ ಪುರ - ವೈಟ್ ಫೀಲ್ಡ್ ಮೆಟ್ರೋ ಸೇವೆ ಪ್ರಾರಂಭ: ಬೆಳಗ್ಗೆ 5 ರಿಂದ ರಾತ್ರಿ 11 ಗಂಟೆವರೆಗೆ ಸಂಚಾರ

Last Updated : Mar 26, 2023, 7:04 AM IST

ABOUT THE AUTHOR

...view details