ಕರ್ನಾಟಕ

karnataka

ETV Bharat / state

ಅಶೋಕ್​​ಗೆ ಪತ್ರ ಬರೆದ ಅಮಿತ್​​ ಶಾ: ಲೋಕ ವಿಜಯಕ್ಕೆ ಅಭಿನಂದನೆ - The BJP is an unprecedented victory

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರಾಜ್ಯಗಳ ಸಂಚಾಲಕರಿಗೆ ಪತ್ರ ಬರೆದಿದ್ದು, ಮಾಜಿ ಡಿಸಿಎಂ ಆರ್.ಅಶೋಕ್​​ಗೂ ಪತ್ರ ಬರೆದಿದ್ದಾರೆ.

ಅಶೋಕ್ ಮತ್ತು ಅಮಿತ್ ಶಾ

By

Published : Aug 1, 2019, 8:09 PM IST

ಬೆಂಗಳೂರು:ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ ಮಾಜಿ ಡಿಸಿಎಂ ಆರ್.ಅಶೋಕ್​​ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರಾಜ್ಯಗಳ ಸಂಚಾಲಕರಿಗೆ ಪತ್ರ ಬರೆದಿದ್ದು, ಮಾಜಿ ಡಿಸಿಎಂ ಆರ್.ಅಶೋಕ್​​ಗೂ ಪತ್ರ ಬರೆದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೋದಿ ಕಾರ್ಯಕ್ರಮ ಆಯೋಜನೆ ಸೇರಿದಂತೆ ಎಲ್ಲ ಕೆಲಸಗಳಲ್ಲೂ ತೊಡಗಿಕೊಂಡು ಪ್ರಚಾರ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖುದ್ದು ಪತ್ರ ಬರೆದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಅಶೋಕ್ ಗೆ ಪತ್ರ ಬರೆದ ಅಮಿತ್ ಶಾ

ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನಾ ಕಾರ್ಯವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ‌. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕೆಂದು ಅಮಿತ್ ಶಾ ಪತ್ರದಲ್ಲಿ ಉಲ್ಲೇಖಿಸಿ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.

ಅಮಿತ್ ಶಾ ಪತ್ರಕ್ಕೆ ಸಂಭ್ರಮ ವ್ಯಕ್ತಪಡಿಸಿರುವ ಮಾಜಿ‌ ಡಿಸಿಎಂ ಆರ್.ಅಶೋಕ್​, ಅಮಿತ್ ಶಾ ಹೇಳಿರುವ ಅಭಿನಂದನೆ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಎಂದು ಟ್ವೀಟ್​​ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ABOUT THE AUTHOR

...view details