ಬೆಂಗಳೂರು:ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಳಂಕ ಹೊತ್ತಿರುವ ಎಡಿಜಿಪಿ ಅಮೃತ್ ಪೌಲ್ರನ್ನು ಪ್ರಮುಖ ಹಾಗೂ ಸೂಕ್ಷ್ಮ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಿ, ಅವರನ್ನು ಪುರಸ್ಕರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿಎಂ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಬಿಜೆಪಿಗರನ್ನು ರಕ್ಷಿಸಲು ಅಮೃತ್ ಪೌಲ್ರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಿದ್ರಾ?'
ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅಮೃತ್ ಪೌಲ್ರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆಯೋ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ
ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅವರನ್ನು ಅಲ್ಲಿಗೆ ವರ್ಗಾಯಿಸಲಾಗಿದೆಯೋ?, ಅಥವಾ ಬಿಜೆಪಿ ನಾಯಕರುಗಳ ಹೆಸರು ಬಹಿರಂಗವಾಗುವುದನ್ನು ತಪ್ಪಿಸಲು ವರ್ಗಾವಣೆ ಮಾಡಲಾಗಿದೆಯಾ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.
ಇದನ್ನೂ ಓದಿ:ಬಿಜೆಪಿ ಸೇರಲು ಸುಮಲತಾಗೆ ಮಾಜಿ ಸಚಿವ ಯೋಗೇಶ್ವರ್ ಆಹ್ವಾನ