ಬೆಂಗಳೂರು :ಕೋವಿಡ್-19 ಮೊದಲ ಹಾಗೂ ಎರಡನೇ ಅಲೆಗೆ ಈವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಒಟ್ಟು 43ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ನೌಕರರು ಸಾವನ್ನಪ್ಪಿದ್ದಾರೆ.
ಪಾಲಿಕೆ ಆಯುಕ್ತರಿಗೆ ಪತ್ರ ಬರೆದ ಅಮೃತ್ ರಾಜ್ ಈ ಮಾಹಿತಿಯನ್ನು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರಿಗೆ ಪತ್ರದ ಮೂಲಕ ತಿಳಿಸಿರುವುದು ಇದೀಗ ಬೆಳಕಿಗೆ ಬಂದಿದೆ.
ಈವರೆಗೆ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮವಹಿಸಿ ದುಡಿದ ಸಿಬ್ಬಂದಿ ಮೃತಪಟ್ಟಿದ್ದಾರೆ. ಆದರೆ, ಅವರ ಕುಟುಂಬಕ್ಕೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಪ್ಯಾಕೇಜ್ ಯೋಜನೆಯಡಿ ತಲಾ 30 ಲಕ್ಷ ರೂ. ಹಣ ಇನ್ನೂ ತಲುಪಿಲ್ಲ.
ಈ ಕುರಿತಂತೆ ಅಮೃತ್ ರಾಜ್ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರ ಗಮನ ಸೆಳೆಯಲು ಪತ್ರದ ಮೂಲಕ ಪರಿಹಾರ ಕೊಡಿಸುವಂತೆ ಆಗ್ರಹಿಸಿದ್ದಾರೆ.