ಕರ್ನಾಟಕ

karnataka

ETV Bharat / state

75 ಯೂನಿಟ್‍ನ ಉಚಿತ ವಿದ್ಯುತ್‍ ಯೋಜನೆ ರದ್ಧತಿ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ

ಅಮೃತ ಜ್ಯೋತಿ ವಿದ್ಯುತ್ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಇಲಾಖೆ ತಿಳಿಸಿದೆ.

amrita-jyoti-power-scheme-not-cancelled-energy-department
Etv Bharat75 ಯೂನಿಟ್‍ನ ಉಚಿತ ವಿದ್ಯುತ್‍ ಯೋಜನೆ ರದ್ಧತಿ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ

By

Published : Sep 9, 2022, 7:15 PM IST

ಬೆಂಗಳೂರು:ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಯೋಜನೆ ಹಿಂಪಡೆದಿಲ್ಲ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ.

ಈ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದು ಕೆಲ ಸಾಮಾಜಿಕ ಜಾಲತಾಣಗಳು, ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಈ ಸಂಬಂಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬದವರಿಗೆ ಅಮೃತ ಜ್ಯೋತಿ ಕಾರ್ಯಕ್ರಮದ ಅಡಿ 75 ಯೂನಿಟ್‍ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಹಿಂಪಡೆದಿರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಗಸ್ಟ್ 24, 2022ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ - ಆಡಳಿತ ಇಲಾಖೆಯು ಭಾಗಶಃ ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್ 3, 2022ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದುಪಡಿಸಿಲ್ಲ ಎಂದು ಇಂಧನ ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ:ಡಾಂಬರೀಕರಣ ಮಾಡಿದ್ದ ರಸ್ತೆ ಅಗೆದ ಆರೋಪ: ಟೆಲಿಕಾಂ ಸಂಸ್ಥೆಗಳಿಗೆ 80 ಕೋಟಿ ದಂಡ ವಿಧಿಸಿದ ಬಿಬಿಎಂಪಿ

ಬಿಪಿಎಲ್ ಕುಟುಂಬದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗ್ರಾಹಕರಿಗೆ 75 ಯೂನಿಟ್​​ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರವು ಮೇ 18, 2022ರಂದು ರಾಜ್ಯಾದ್ಯಂತ ಜಾರಿಗೆ ತಂದಿತ್ತು. ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂಬ ತಪ್ಪು ಮಾಹಿತಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಇಲಾಖೆ ತಿಳಿಸಿದೆ.

ಈ ಯೋಜನೆಯನ್ನು ಇ - ಆಡಳಿತ ಇಲಾಖೆಯ ಸಹಯೋಗದೊಂದಿಗೆ ಡಿಬಿಟಿ ವ್ಯವಸ್ಥೆಯಡಿ ಜಾರಿಗೊಳಿಸಲಾಗಿದೆ. ಫಲಾನುಭವಿ ಗ್ರಾಹಕರಿಗೆ ತಾವು ಪಾವತಿಸಿದ ಒಟ್ಟು ವಿದ್ಯುತ್ ಬಿಲ್​ನ ಮೊತ್ತದಲ್ಲಿ 75 ಯೂನಿಟ್‍ಗಳವರೆಗಿನ ವಿದ್ಯುತ್ ಶುಲ್ಕದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತಿದೆ.

ಇದನ್ನೂ ಓದಿ:ಉಚಿತ ವಿದ್ಯುತ್‌ಗೆ ಕಡಿವಾಣ, ಕೃಷಿ ಪಂಪ್​ಸೆಟ್​ಗಳಿಗೆ ಮೀಟರ್ ಬೇಡ: ಸಿದ್ದರಾಮಯ್ಯ ಆಗ್ರಹ

ABOUT THE AUTHOR

...view details