ಬೆಂಗಳೂರು:ವಿವಿಧ ಹೆಸರಿನಲ್ಲಿ ಫೇಸ್‌ಬುಕ್ ಖಾತೆ ತೆರೆದು ಮಹಿಳೆಯರಿಗೆ ಆಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಸೈಯದ್ ನಯಾಜ್ ಬಂಧಿತ ಆರೋಪಿ. ಈತನಿಂದ 3 ಮೊಬೈಲ್, 4 ಸಿಮ್ ವಶಪಡಿಸಿಕೊಳ್ಳಲಾಗಿದೆ. ನಗರದ ಸಿಸಿಬಿ ಘಟಕದ ಸೈಬರ್ ಕ್ರೈಂ ಪೊಲೀಸರು ಶುಕ್ರವಾರ ಬೆಳಗ್ಗೆ ತಮಿಳುನಾಡಿನ ಹೊಸೂರಿನ ಬಸ್ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿದ್ದಾರೆ .ಆಗ ಈತ ನಕಲಿ ಫೇಸ್‌ಬುಕ್ ಖಾತೆಗಳನ್ನು ತೆರೆದು ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದು, ಅನಂತರ ರಿಕ್ವೆಸ್ಟ್ ಸ್ವೀಕರಿಸಿದ ಮಹಿಳೆಯರೊಂದಿಗೆ ಚಾಟಿಂಗ್ ಮಾಡುತ್ತಾ ಆಶ್ಲೀಲ ಸಂಭಾಷಣೆ ಹಾಗೂ ಆಶ್ಲೀಲ ಭಾವಚಿತ್ರ ಕಳುಸುತ್ತಿದ್ದನು. ಜೊತೆಗೆ ವಿಡಿಯೋ ಕರೆ ಮಾಡುತ್ತಾ ಅನುಚಿತ ರೀತಿಯಲ್ಲಿ ವರ್ತಿಸುತ್ತಿದ್ದ ಎಂಬುದು ತಿಳಿದು ಬಂದಿದೆ.