ಬೆಂಗಳೂರು: ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ ಮೂಲಕ ಆ್ಯಂಬುಲೆನ್ಸ್ನಲ್ಲಿ ಪುತ್ತೂರಿನಿಂದ ಬೆಂಗಳೂರಿನ ಆಸ್ಪತ್ರೆಗೆ ತಲುಪಿಸಿದ ಚಾಲಕ ಹನೀಫ್ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ತುರ್ತಾಗಿ ಶ್ವಾಸಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದ್ದ ಸುಹಾನ (22) ಎಂಬ ಯುವತಿಯನ್ನು ಹನೀಫ್, ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ- ಗುರುವಾಯನಕೆರೆ- ಉಜಿರೆ- ಚಾರ್ಮಾಡಿ ಘಾಟಿ ಮೂಲಕ ಒಂದೂವರೆ ಗಂಟೆಯಲ್ಲಿ ಮೂಡಿಗೆರೆ ಹ್ಯಾಂಡ್ ಪೋಸ್ಟ್ ತಲುಪಿಸಿ, ಅಲ್ಲಿಂದ ಬೇಲೂರು ಮೂಲಕ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ವೈದೇಹಿ ಆಸ್ಪತ್ರೆಗೆ 4 ಗಂಟೆ 20 ನಿಮಿಷಗಳಲ್ಲಿ ತಲುಪುವ ಮೂಲಕ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರೋಗಿಯನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.