ಕರ್ನಾಟಕ

karnataka

ETV Bharat / state

ಒಂದು ಲಕ್ಷ ರೂಪಾಯಿ ಲಂಚ ಪಡೆದಿದ್ದ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ - bribery case

2017 ಮಾರ್ಚ್ 28ರಂದು ದೂರುದಾರನಿಂದ ಲಿಂಗಯ್ಯ 1 ಲಕ್ಷ ರೂ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ಆತನ ಕಚೇರಿ ಮೇಲೆ ದಾಳಿ ನಡೆಸಿದ್ದರು.

ಒಂದು ಲಕ್ಷ ರೂಪಾಯಿ ಲಂಚ ಪಡೆದಿದ್ದ ಅಧಿಕಾರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ
ಒಂದು ಲಕ್ಷ ರೂಪಾಯಿ ಲಂಚ ಪಡೆದಿದ್ದ ಅಧಿಕಾರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

By

Published : Aug 31, 2021, 7:46 AM IST

ಬೆಂಗಳೂರು: ಮೂರು ವರ್ಷಗಳ ಹಿಂದೆ ಖಾತೆ ಬದಲಾವಣೆ ಮಾಡಲು ಒಂದು ಲಕ್ಷ ರೂಪಾಯಿ ಲಂಚ ಪಡೆದು ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಬಲೆಗೆ ಬಿದ್ದಿದ್ದ ಮಹಾಲಕ್ಷ್ಮೀಪುರ ವಾರ್ಡ್‍ನ ಸಹಾಯಕ ಕಂದಾಯ ಅಧಿಕಾರಿಗೆ 23ನೇ ಸಿಟಿ ಸಿವಿಲ್ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಮಹಾಲಕ್ಷ್ಮೀಪುರ ವಾರ್ಡ್‍ನ ಸಹಾಯಕ ಕಂದಾಯ ಅಧಿಕಾರಿ ಲಿಂಗಯ್ಯ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಸುಂಕದಕಟ್ಟೆ ಶ್ರೀಗಂಧ ಕಾವಲ್ ನಿವಾಸಿಯೊಬ್ಬರು 2017 ಮಾರ್ಚ್‍ನಲ್ಲಿ ಸ್ನೇಹಿತರ ಸ್ವತ್ತಿನ ಖಾತೆ ಬದಲಾವಣೆ ಮಾಡಲು ಬಿಬಿಎಂಪಿ ಮಹಾಲಕ್ಷ್ಮೀಪುರ ವಾರ್ಡ್ ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆ ಮಾಡಲು ಲಿಂಗಯ್ಯ 2.50 ಲಕ್ಷ ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಲಂಚ ನೀಡಲು ಇಚ್ಛಿಸದ ಅರ್ಜಿದಾರ ಈ ಬಗ್ಗೆ ಎಸಿಬಿಗೆ ದೂರು ಕೊಟ್ಟಿದ್ದರು. 2017 ಮಾರ್ಚ್ 28ರಂದು ದೂರುದಾರನಿಂದ ಲಿಂಗಯ್ಯ 1 ಲಕ್ಷ ರೂ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ಆತನ ಕಚೇರಿ ಮೇಲೆ ದಾಳಿ ನಡೆಸಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದರು. ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ಸಿಟಿ ಸಿವಿಲ್ ಕೋರ್ಟ್ ಗೆ 2017ನೇ ಸಾಲಿನಲ್ಲಿ ದೋಷರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣವು ಕಳೆದ 3 ವರ್ಷಗಳಿಂದ ವಿಚಾರಣಾ ಹಂತದಲ್ಲಿತ್ತು.ಆಗಸ್ಟ್ 30ರಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಎಸಿಬಿ ಅಧಿಕಾರಿಗಳು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿದ್ದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದಾಗ ಲಿಂಗಯ್ಯ ಭ್ರಷ್ಟಾಚಾರ ಎಸಗಿರುವುದು ಸಾಬೀತಾಗಿತ್ತು. ಹೀಗಾಗಿ ಲಿಂಗಯ್ಯನಿಗೆ 4 ವರ್ಷ ಶಿಕ್ಷೆ ಮತ್ತು 3 ಲಕ್ಷ ರೂಪಾಯಿ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ ಎಂದು ಎಸಿಬಿ ಮಾಹಿತಿ ನೀಡಿದೆ.

ABOUT THE AUTHOR

...view details