ಬೆಂಗಳೂರು : ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಚಾಲಕ ಸೇರಿ ಇಬ್ಬರು ಅಪಘಾತದಲ್ಲಿ ದುರಂತ ಅಂತ್ಯ ಕಂಡಿರುವ ಘಟನೆ ನಿನ್ನೆ ಬೆಳಗ್ಗಿನ ಜಾವ ಸಿಲ್ಕ್ ಬೋರ್ಡ್ ಸಮೀಪದ ಹೊಸೂರು ರಸ್ತೆಯ ಎಕ್ಸ್‌ಪ್ರೆಸ್ ವೇನಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ಕಾರ್ತಿಕ್ (23) ಹಾಗೂ ಭಗೀರಥ ರೆಡ್ಡಿ (17) ಮೃತ ದುದೈರ್ವಿಗಳು ಎಂದು ತಿಳಿದುಬಂದಿದೆ.
ಅತಿ ವೇಗದಿಂದ ಸಾಗುತ್ತಿದ್ದ ಪರಿಣಾಮ ಕಾರ್ತಿಕ್ ರೆಡ್ಡಿ ಚಲಾಯಿಸುತ್ತಿದ್ದ ಕಾರು ಚತುಷ್ಪಥ ರಸ್ತೆಯ ವಿಭಜಕ ದಾಟಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಕಾರು ಹಾಗೂ ಬಸ್ಸಿಗೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಇಬ್ಬರೂ ಸಹ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶ ಮೂಲದವರಾದ ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದುಕೊಂಡು ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಮಡಿವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ ಬಸ್ ಪಲ್ಟಿಯಾಗಿ 20 ಜನರಿಗೆ ಗಾಯ:ಇನ್ನೊಂದೆಡೆ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಭಾರಿ ದುರಂತವೊಂದು ತಪ್ಪಿರುವ ಘಟನೆ ನಗರದ ಬೇತೂರು ರಸ್ತೆ ಬಳಿ ಸೋಮವಾರ ನಡೆದಿತ್ತು. ಬಸ್ ಸೇತುವೆ ಮೇಲೆ ಹತ್ತಿದ್ದು ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದವು. ಅದೃಷ್ಟವಶಾತ್ ಬಸ್ ಸೇತುವೆ ಮೇಲಿಂದ ಕೆಳಗೆ ಬಿದ್ದಿರಲಿಲ್ಲ.
ಇದನ್ನೂ ಓದಿ :ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತೆ ಸಾವು: ಕೊಲೆ ಆರೋಪ