ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರ್ಯಾಚರಣೆ ನಡೆಸಿ 9 ಆರೋಪಿಗಳ ಸಮೇತ 20 ಲಕ್ಷ ಮೌಲ್ಯದ 57 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
20 ಲಕ್ಷ ರೂ. ಮೌಲ್ಯದ 57 ಕೆಜಿ ಗಾಂಜಾ ವಶ: 9 ಮಂದಿಯ ಬಂಧನ - ಅನೇಕಲ್ ಬೆಂಗಳೂರು ಲೆಟೆಸ್ಟ್ ನ್ಯೂಸ್
ನೈಸ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಬ್ಬರನ್ನು ವಶಪಡಿಸಿಕೊಂಡು, ಅವರು ನೀಡಿದ ಮಾಹಿತಿ ಮೇರೆಗೆ ಉಳಿದ 7 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಂಗೇರಿ ಮೂಲದ ಬಾಲರಾಜು ಹಾಗೂ ಆಂಧ್ರ ಪ್ರದೇಶ ಮೂಲದ ಮನೋಹರ್ ಎಂಬುವರು ನೈಸ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಬ್ಬರು ಆರೋಪಿಗಳನ್ನು ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ನಂತರ ಇಬ್ಬರು ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಬೆಟ್ಟದಾಸಪುರ ಹಾಗೂ ಎಲೆಕ್ಟ್ರಾನಿಕ್ ಸಿಟಿ ಬಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ 7 ಮಂದಿಯನ್ನು ಬಂಧಿಸುವಲ್ಲಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ದ್ವಿಚಕ್ರ ವಾಹನಗಳು, ಕಾರು, ಮೊಬೈಲ್ಮತ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.