ಕರ್ನಾಟಕ

karnataka

ETV Bharat / state

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ : ಪರಿಹಾರಕ್ಕೆ ಸಿದ್ದರಾಮಯ್ಯ ಆಗ್ರಹ - ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್​

ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

anganwadi workers protest
ಸಿದ್ದರಾಮಯ್ಯ

By

Published : Jan 21, 2023, 3:37 PM IST

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನದಿಂದ ಸಾವನ್ನಪ್ಪಿದ ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.​

ಸಿದ್ದರಾಮಯ್ಯ ಟ್ವೀಟ್​: 'ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಕಳೆದ ಮೂರು ದಿನಗಳಿಂದ ಚಳಿ, ಬಿಸಿಲು ಎನ್ನದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ, ಕನಿಷ್ಠ ಪಕ್ಷ ಅವರ ಸಮಸ್ಯೆಯನ್ನು ಆಲಿಸುವ ಸೌಜನ್ಯವಾದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬೇಡವೇ?. ಮಾತುಕತೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೇ ಮಾಡದೆ, ಏಕಾಏಕಿ ಪ್ರತಿಭಟನಾನಿರತ ಮೇಲೆ ಬಲಪ್ರಯೋಗ ಮಾಡುವುದು, ಬಂಧಿಸುವುದು ರಾಜ್ಯ ಬಿಜೆಪಿ ಸರ್ಕಾರದ ದಾರ್ಷ್ಟ್ಯವನ್ನು ತೋರುತ್ತದೆ. "ಆರುವ ಮೊದಲು ದೀಪ ಜೋರಾಗಿ ಉರಿಯುತ್ತದೆಯಂತೆ, ಬಿಜೆಪಿ ಸರ್ಕಾರವೂ ಹಾಗೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಟ್ವೀಟ್​:ಇನ್ನು​ ಈ ಬಗ್ಗೆ ಕರ್ನಾಟಕ ಕಾಂಗ್ರೆಸ್​​ ಟ್ವೀಟ್​ ಮಾಡಿದ್ದು, 'ಅಂಗನವಾಡಿ ಕಾರ್ಯಕರ್ತೆಯರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು ತಿರುಗಿ ನೋಡದ ಸರ್ಕಾರ ಪೊಲೀಸರ ಮೂಲಕ ದೌರ್ಜನ್ಯ ಎಸಗುತ್ತಿದೆ. ಪ್ರತಿಭಟನೆಯಲ್ಲಿದ್ದ ಕಾರ್ಯಕರ್ತೆ ನೀಲಮ್ಮ ಅಸ್ವಸ್ಥಗೊಂಡು ಅಸುನೀಗಿದ್ದಾರೆ. ಇದು ಬೇಜವಾಬ್ದಾರಿ ರಾಜ್ಯ ಸರ್ಕಾರ ನಡೆಸಿದ ಕೊಲೆ. ಅಮಾನವಿಯತೆಗೆ ಮತ್ತೊಂದು ಹೆಸರೇ ಬೊಮ್ಮಾಯಿ ಸರ್ಕಾರ. ಸರ್ಕಾರದ ಹೊಣೆಗೆಡಿತನದಿಂದ ಸಾವಿಗೀಡಾದ ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು. ಸಿಎಂ ಅವರು ಹೋರಾಟ ನಿರತ ಕಾರ್ಯಕರ್ತೆಯರನ್ನ ಭೇಟಿಯಾಗಿ ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು.

ಮದುವೆ, ಮುಂಜಿ, ಗೃಹಪ್ರವೇಶಗಳಿಗೆ ಭೇಟಿ ನೀಡುವ ಸಿಎಂಗೆ ಅಂಗನವಾಡಿ ಕಾರ್ಯಕರ್ತೆಯರ ಭೇಟಿಗೆ ಪುರಸೊತ್ತಿಲ್ಲವೇ? ಅಂಗನವಾಡಿಗಳಿಗೆ ಅನುದಾನವಿಲ್ಲ, ಮೊಟ್ಟೆ ಖರೀದಿಯಲ್ಲಿ ಹಗರಣ, ಮಕ್ಕಳಿಗೆ ಹುಳು ಹಿಡಿದ ಆಹಾರ, ಈಗ ಕಾರ್ಯಕರ್ತೆಯರ ಮೇಲೆ ಅಮಾನುಷ ಹಲ್ಲೆ. ಬೊಮ್ಮಾಯಿ ಅವರೇ, ನಿಮ್ಮ ಸರ್ಕಾರ ನಡೆಸಿದ ಈ ದೌರ್ಜನ್ಯಕ್ಕೆ ಕ್ಷಮೆ ಇಲ್ಲ. ಭ್ರಷ್ಟರು, ಬ್ರೋಕರ್‌ಗಳು, ರೌಡಿಗಳಿಗೆ ಘನ ಮರ್ಯಾದೆ ನೀಡುವ ಬಿಜೆಪಿಗೆ ಅಂಗನವಾಡಿ ತಾಯಂದಿರೆಂದರೆ ತಾತ್ಸಾರವೇ?' ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ಘಟನೆ ವಿವರ:ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸ್ವತಂತ್ರ ಸಂಘಟನೆ ಬೆಂಗಳೂರಿನಲ್ಲಿ ಕಳೆದ ಮೂರು ದಿನದಿಂದ ಪ್ರತಿಭಟನೆ ನಡೆಸುತ್ತಿದೆ. 'ನೌಕರಿ ಖಾಯಂಗೊಳಿಸಬೇಕು. ನಮ್ಮನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ನಡೆಯುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದೆ.

ಇದನ್ನೂ ಓದಿ:ಸ್ಯಾಂಟ್ರೋ ರವಿ ಪ್ರಕರಣವನ್ನ ಮುಚ್ಚಿ ಹಾಕುವ ಯತ್ನ: ಸಿದ್ದರಾಮಯ್ಯ ಆರೋಪ

ABOUT THE AUTHOR

...view details