ಕರ್ನಾಟಕ

karnataka

ETV Bharat / state

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ : ಪತ್ನಿ ಅನಿತಾ ಕುಮಾರಸ್ವಾಮಿ ಹೋಂ ಕ್ವಾರಂಟೈನ್​ - ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ

ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಕೆಲ ದಿನಗಳ ಕಾಲ ಜೆಪಿನಗರದ ಗೃಹ ಕಚೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿದ್ದಾರೆ..

Anita Kumaraswamy Home Quarantine
ಅನಿತಾ ಕುಮಾರಸ್ವಾಮಿ ಹೋಂ ಕ್ವಾರಂಟೈನ್​

By

Published : Apr 17, 2021, 5:32 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಗೆ ಹೋಂ ಕ್ವಾರಂಟೈನ್ ಆಗುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ವೈದ್ಯರಿಂದ ಮುಂದಿನ ಸೂಚನೆ ಬರುವವರೆಗೂ ಶಾಸಕಿ ಹೋಂ ಕ್ವಾರಂಟೈನ್​ನಲ್ಲಿ ಇರಲಿದ್ದಾರೆ. ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಕೆಲ ದಿನಗಳ ಕಾಲ ಜೆಪಿನಗರದ ಗೃಹ ಕಚೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿದ್ದಾರೆ.

ಈ ಹಿನ್ನೆಲೆ ಅನ್ಯತಾ ಭಾವಿಸದೆ ಕಾರ್ಯಕರ್ತರು, ಮುಖಂಡರುಗಳು ಸಹಕರಿಸಬೇಕೆಂದು ಮನವಿ ಮಾಡಲಾಗಿದೆ. ಪ್ರತಿಯೊಬ್ಬರು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಅನಿತಾ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ABOUT THE AUTHOR

...view details