ಕರ್ನಾಟಕ

karnataka

ETV Bharat / state

ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ - ಹೆಚ್​ ಡಿ ಕುಮಾರಸ್ವಾಮಿ

ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಚುನಾವಣಾ ಸ್ಪರ್ಧೆ ವದಂತಿ ಬೆನ್ನಲ್ಲೇ ಸ್ವತಃ ಅನಿತಾ ಅವರೇ ಈ ಕುರಿತು ಟ್ವೀಟ್​ ಮಾಡಿದ್ದಾರೆ.

jds
ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ

By

Published : Apr 4, 2023, 1:17 PM IST

ಬೆಂಗಳೂರು :ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತೊಮ್ಮೆ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮನಗರ ಕ್ಷೇತ್ರವನ್ನು ಈಗಾಗಲೇ ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಃ ಸ್ಪರ್ಧಿಸುವ ಮಾತೆಲ್ಲಿ? ಎಂದು ಕೇಳಿದ್ದಾರೆ. 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆ ನಡೆದಾಗ ಪಕ್ಷ ಮತ್ತು ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರ ಆದೇಶಕ್ಕೆ ಗೌರವ ಕೊಟ್ಟು ಮಧುಗಿರಿಯಲ್ಲಿ ನನಗೆ ಇಷ್ಟವಿಲ್ಲದಿದ್ದರೂ ಸ್ಪರ್ಧಿಸಿದ್ದೆ.

ಇದನ್ನೂ ಓದಿ:ಡಿಕೆ ಶಿವಕುಮಾರ್​ ಸಿಎಂ ಆಗಲ್ಲ ಎಂದು ಹೇಳಿಲ್ಲ.. ಮಾಧ್ಯಮಗಳಲ್ಲಿ ವರದಿಯಾಗಿದ್ದು ಸುಳ್ಳು ಸುದ್ದಿ: ಸಿದ್ದರಾಮಯ್ಯ ಸ್ಪಷ್ಟನೆ

ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ- ಅನಿತಾ ಕುಮಾರಸ್ವಾಮಿ:ನಂತರದ ಚುನಾವಣೆಯಲ್ಲಿ ಶ್ರೀ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2018ರಲ್ಲಿ ಮತ್ತೆ ರಾಮನಗರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗಿರಿಯುವ ಕೃತ್ಯವೆಸಗಿದಾಗ ಪಕ್ಷ, ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಹೀಗೆ ಎರಡು ಸಲವೂ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ತಿಳಿಸಿದ್ದಾರೆ.

ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ:ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದಿದ್ದಾರೆ. ಎರಡೂ ಉಪ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.

ಇದೇ ವಿಚಾರದ ಕುರಿತಾಗಿ ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ನನ್ನ ಪತ್ನಿ ಪಕ್ಷ ಉಳಿಸಿಕೊಳ್ಳಲು ಚುನಾವಣೆಗೆ ನಿಂತರು ಅನ್ನೋದು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ. ಈಗ ಇದನ್ನು ಹಾಸನ ಅಭ್ಯರ್ಥಿ ಆಯ್ಕೆಗೆ ಹೊಂದಿಸಿ ಚರ್ಚೆ ಮಾಡುವುದು ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:ಪಕ್ಷ ಉಳಿಸಿಕೊಳ್ಳಲು ಅನಿತಾ ಕುಮಾರಸ್ವಾಮಿ ಆಯ್ಕೆ: ಹೆಚ್​ ಡಿ ಕುಮಾರಸ್ವಾಮಿ

ABOUT THE AUTHOR

...view details