ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಆಗಸ್ಟ್ ತಿಂಗಳ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಪಡಿತರದಾರರ ಬ್ಯಾಂಕ್ ಖಾತೆಗೆ ಪಾವತಿಸಲಾಗುತ್ತಿದೆ.
ರಾಜ್ಯ ಸರ್ಕಾರವು ಜುಲೈ ತಿಂಗಳಿನಿಂದ ರಾಜ್ಯದ ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಪಿಎಚ್‌ಎಚ್) ಹೊಂದಿರುವ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ವಿತರಿಸುವುದಾಗಿ ಘೋಷಿಸಿತ್ತು. ಈ ಅಕ್ಕಿಯ ಅಗತ್ಯವನ್ನು FCI (ಫುಡ್ ಕಾರ್ಪೋರೇಷನ್)ನಿಂದ ದೇಶೀಯ ಮುಕ್ತ ಮಾರುಕಟ್ಟೆಯಲ್ಲಿ (OMSS(D) ಅಕ್ಕಿಯನ್ನು ಖರೀದಿಸುವ ಮೂಲಕ ಪೂರೈಸಲು ಯೋಜಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಜುಲೈ 2023ರಿಂದ ದೇಶೀಯ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿದೆ. ಹಾಗಾಗಿ, ರಾಜ್ಯವು ಜುಲೈನಿಂದ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಪಿಎಚ್‌ಎಚ್) ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯನ್ನು ಪ್ರಾರಂಭಿಸಿತು. ಮತ್ತು ಅದೇ ರೀತಿ ಮುಂದುವರಿಯುತ್ತಿದೆ.
ಆಗಸ್ಟ್ ತಿಂಗಳ ಹಣ ಪಾವತಿ :ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ವಿತರಿಸಲಾಗಿದೆ. ಹೆಚ್ಚುವರಿ 5 ಕೆಜಿ ಬದಲಿಗೆ ಪಡಿತರ ಚೀಟಿಯಲ್ಲಿರುವಂತೆ ಕುಟುಂಬದ ಪ್ರತಿ ಫಲಾನುಭವಿಗೆ (ಪ್ರತಿ ಕೆ.ಜಿ.ಗೆ 34 ರೂ. ನಂತೆ) 170 ರೂ.ಗಳನ್ನು ಪಡಿತರ ಕುಟುಂಬದ ಮುಖ್ಯಸ್ಥರ ಖಾತೆಗೆ ನೇರ ನಗದು ವರ್ಗಾವಣೆ ವ್ಯವಸ್ಥೆ ಮೂಲಕ ಪಾವತಿ ಮಾಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಆಗಸ್ಟ್ ತಿಂಗಳ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಪಡಿತರದಾರರ ಖಾತೆಗೆ ಪಾವತಿಸಲಾಗುತ್ತಿದೆ.