ಬೆಂಗಳೂರು:ತಮಿಳುನಾಡು ರಾಜಕೀಯ ಪ್ರವೇಶಿಸಿದರೂ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಕನ್ನಡ ಪ್ರೇಮವನ್ನು ಮುಂದುವರೆಸಿದ್ದಾರೆ.
ತಮಿಳುನಾಡು ರಾಜಕೀಯ ಪ್ರವೇಶಿಸಿದರೂ ಕನ್ನಡದಲ್ಲೇ ಪತ್ರಿಕಾ ಪ್ರಕಟಣೆ ಹೊರಡಿಸಿದ ಅಣ್ಣಾಮಲೈ - Annamalai
ಇಂದು ಬಿಜೆಪಿಗೆ ಸೇರ್ಪಡೆಯಾಗಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅರ್ಣಣಾಮಲೈ ಅವರು ತಮಿಳುನಾಡು ರಾಜಕೀಯಕ್ಕೆ ಅಧಿಕೃತವಾಗಿ ಕಾಲಿಟ್ಟಿದ್ದು, ಕನ್ನಡದಲ್ಲೂ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ತಮ್ಮ ಕನ್ನಡ ಪ್ರೇಮ ಮೆರೆದಿದ್ದಾರೆ.
ಅಣ್ಣಾಮಲೈ
ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಆರಂಭಿಸಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಒಂದು ವರ್ಷದ ಹಿಂದೆ ಐಪಿಎಸ್ ಹುದ್ದೆಗೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದರು. ಹಲವು ದಿನಗಳಿಂದ ರಾಜಕೀಯ ಪ್ರವೇಶಸಲಿದ್ದಾರೆ ಎಂಬ ವದಂತಿ ಹರಡಿತ್ತು. ಇದಕ್ಕೆಲ್ಲಾ ಪೂರ್ಣವಿರಾಮ ಹಾಕಿದ ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ರಾಜಾಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜಿಪಿ ಪಕ್ಷ ಸೇರ್ಪಡೆಗೊಂಡಿರುವ ಬಗ್ಗೆ ಇಂಗ್ಲಿಷ್, ತಮಿಳು ಹಾಗೂ ಕನ್ನಡದಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.