ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಅರೆಸ್ಟ್ - ಸ್ಯಾಂಡಲ್ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನ ಬಂಧನ

13:04 December 21
ಡ್ರಗ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ವಿನಯ್ ಕುಮಾರ್ ಎಂಬಾತನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿ ವಿನಯ್ ಕುಮಾರ್ ಎಂಬಾತನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈತ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಜೊತೆ ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗ್ತಿದೆ.
ಈತ ರಾಗಿಣಿ ಹಾಗೂ ಸಂಜನಾ ಆಪ್ತರ ಜೊತೆ ಸೇರಿಕೊಂಡು ಹಲವಾರು ಪಾರ್ಟಿಯಲ್ಲಿ ಮಾದಕ ವಸ್ತು ಪೂರೈಸುತ್ತಿದ್ದ. ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ವಿನಯ್, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಈತನ ಜಾಮೀನು ಅರ್ಜಿಯನ್ನ NDPS ಕೋರ್ಟ್ ವಜಾಗೊಳಿಸಿತ್ತು.
ಇದನ್ನೂ ಓದಿ:‘ಕುಮಾರ’ ಎಡವಟ್ಟು.. ಜಾಮೀನು ಸಿಕ್ಕರೂ 8 ತಿಂಗಳು ಜೈಲುವಾಸ
ಇದೇ ತಿಂಗಳು ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸಬೇಕಿರುವ ಸಿಸಿಬಿ ಅಧಿಕಾರಿಗಳು ವಿನಯ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.