ಕರ್ನಾಟಕ

karnataka

ETV Bharat / state

ಮಂಗಳೂರು ಕುಕ್ಕರ್​ ಬಾಂಬ್​ ಬ್ಲಾಸ್ಟ್​.. ಶಾರಿಕ್​ನೊಂದಿಗೆ ಸಂಪರ್ಕದಲ್ಲಿದ್ದ ಮಹಮದ್​ ರುಹುಲ್ಲಾ ವಶಕ್ಕೆ - ಮಂಗಳೂರು ಕುಕ್ಕರ್​ ಬಾಂಬ್​ ಬ್ಲಾಸ್ಟ್

ಆಟೋ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಾರಿಕ್ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಮೈಸೂರು ನಿವಾಸಿ ಮಹಮದ್ ರುಹುಲ್ಲಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಂಬ್​ ಬ್ಲಾಸ್ಟ್ ನಡೆದ ಸ್ಥಳ
ಬಾಂಬ್​ ಬ್ಲಾಸ್ಟ್ ನಡೆದ ಸ್ಥಳ

By

Published : Nov 21, 2022, 6:24 PM IST

Updated : Nov 21, 2022, 7:31 PM IST

ಬೆಂಗಳೂರು: ನಗರದಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಿವಾಸಿಯೊಬ್ಬನನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಮದ್ ರುಹುಲ್ಲಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತ ಕೆ ಜಿ ಹಳ್ಳಿಯಲ್ಲಿ ಒಂದು ಕಾರ್ಯಕ್ರಮಕ್ಕೆ ಆಗಮಿಸಿದ್ದಾನೆ. ಆ ಕಾರ್ಯಕ್ರಮಕ್ಕೆ ಮೈಸೂರಿನ ಪೂರ್ವ ವಿಭಾಗ ಪೊಲೀಸರು ಬಂದಿದ್ದಾರೆ. ಈ ವೇಳೆ ಆತನನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.

ಶಾರಿಕ್ ಜೊತೆಗೆ ನಿರಂತರ ಸಂಪರ್ಕದಲ್ಲಿ ಇದ್ದ ಕಾರಣ ಆತನನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಮಹಮದ್ ರುಹುಲ್ಲಾ ಎಂಬಾತನನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ.

ಓದಿ:ಸ್ಫೋಟದ ಪ್ರಮುಖ ಆರೋಪಿ ಶಾರೀಕ್​ಗೆ ಐಸಿಸ್‌ ಉಗ್ರ ಸಂಘಟನೆ ಪ್ರೇರಣೆ: ಎಡಿಜಿಪಿ ಅಲೋಕ್‌ ಕುಮಾರ್

Last Updated : Nov 21, 2022, 7:31 PM IST

ABOUT THE AUTHOR

...view details