ಬೆಂಗಳೂರು :ಮಹಿಳೆಯೊಬ್ಬರ ಮೇಲೆ ಇತ್ತೀಚೆಗೆ ನಡೆದ ಆ್ಯಸಿಡ್ ದಾಳಿ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ. ಬೆಂಗಳೂರಿನ ಕಬ್ಬನ್ಪೇಟೆ 10ನೇ ಕ್ರಾಸ್ನಲ್ಲಿ ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಗಾಯಾಳು ಮತ್ತು ಆರೋಪಿ ಒಂದೇ ಕಡೆ ಕೆಲಸ ಮಾಡುತ್ತಿದ್ರು. ಭಾನುವಾರ ಕ್ಷುಲ್ಲಕ ವಿಚಾರಕ್ಕೆ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಜನತಾ ಅದಕ್ ಡೈಲೂಟೇಡ್ ಸೆಲ್ಫುರಿಕ್ ಆ್ಯಸಿಡ್ ಎರಚಿ ಕ್ರೌರ್ಯ ಮೆರೆದಿದ್ದಾನೆ.