ಬೆಂಗಳೂರು:ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಡ್ರಗ್ಸ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
ನಯಾಜ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಟಿ ರಾಗಿಣಿ ಆಪ್ತ ರವಿಶಂಕರ್ ಮಾಹಿತಿ ಆಧಾರದ ಮೇಲೆ ನಯಾಜ್ನನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ರಾತ್ರಿ ನಯಾಜ್ನನ್ನು ವಶಕ್ಕೆ ಪಡೆದಿದ್ದು, ರವಿಶಂಕರ್ ಹಾಗೂ ನಟಿ ರಾಗಿಣಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದನೆಂದು ಹೇಳಿದ್ದಾನೆಂಬ ಮಾಹಿತಿ ಲಭ್ಯವಾಗಿದೆ.