ಬೆಂಗಳೂರು/ಕಲಬುರಗಿ: ಕಳೆದೊಂದು ವಾರದಿಂದ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಏರಿಕೆ ಆಗುತ್ತಿದೆ. ಕಲಬುರಗಿಯಲ್ಲ್ಲಿ 80 ವರ್ಷದ ವೃದ್ಧ ನಿನ್ನೆ ಸಾವನ್ನಪಿದ್ದಾರೆ.
ಕೊರೊನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿ: ಸಾವಿನ ಸಂಖ್ಯೆ 17ಕ್ಕೆ ಏರಿಕೆ
ಮೊನ್ನೆ ಮಧ್ಯರಾತ್ರಿ ಜ್ವರ, ನಿಶ್ಯಕ್ತಿ ಕಂಡು ಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ಫಲಿಸದೆ ನಿನ್ನೆ ಬೆಳಗ್ಗೆ 9 ಗಂಟೆಗೆ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ ಮೃತರ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇದ್ದದ್ದು ಗೊತ್ತಾಗಿದೆ.
ಮೊನ್ನೆ ಮಧ್ಯರಾತ್ರಿ ಜ್ವರ, ನಿಶ್ಯಕ್ತಿ ಕಂಡು ಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ಫಲಿಸದೆ ನಿನ್ನೆ ಬೆಳಗ್ಗೆ 9 ಗಂಟೆಗೆ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ ಮೃತರ ವರದಿ ಬಂದಿದ್ದು, ಇವರಿಗೆ ಕೊರೊನಾ ಪಾಸಿಟಿವ್ ಇದ್ದದ್ದು ತಿಳಿದುಬಂದಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕೋವಿಡ್-19 ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆ ಆಗಿದೆ.
ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ 17 ಮಂದಿ ಪೈಕಿ ಶೇ.80% ರಷ್ಟು 60 ವಯಸ್ಸಿನ ಮೇಲ್ಪಟ್ಟವರಾಗಿದ್ದಾರೆ. ಅನೇಕರು ತಡವಾಗಿ ಆಸ್ಪತ್ರೆಗೆ ಬಂದಿರುವುದು ಸಾವಿಗೆ ಮತ್ತೊಂದು ಪ್ರಮುಖ ಕಾರಣವಾಗಿದೆ. ಹೀಗಾಗಿಯೇ, ಆರೋಗ್ಯ ಇಲಾಖೆಯು 60 ವರ್ಷ ಮೇಲ್ಪಟ್ಟವರಿಗೆ ಅನಾರೋಗ್ಯ ಸಮಸ್ಯೆ ಉಂಟಾದರೆ ತಡಮಾಡದೆ ಆದಷ್ಟು ಬೇಗ ಆಸ್ಪತ್ರೆಗೆ ಕರೆ ತರುವಂತೆ ಮನವಿ ಮಾಡಿದ್ದಾರೆ.