ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮತ್ತೊಂದು ಬಲಿ ಪಡೆದಿದೆ. ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರದ ವ್ಯಕ್ತಿ ಕೋವಿಡ್-19 ಸೋಂಕು ತಗುಲಿ ಸಾವನ್ನಪ್ಪಿದ್ದಾನೆ. ಅಲ್ಲದೆ, ಇಂದು 17 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಮತ್ತೊಂದೆಡೆ ಬಾಗಲಕೋಟೆಯ ಜಿಲ್ಲೆಯಲ್ಲಿ ಮದರಸಾ ಡ್ಯೂಟಿಗೆ ಹಾಕಿದ್ದ ಪೊಲೀಸ್ ಸಿಬ್ಬಂದಿಗೂ ಸೋಂಕು ತಗುಲಿದ್ದು, ನಿಗದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕಲಬುರಗಿಯಲ್ಲಿ ಒಂದು ವರ್ಷದ ಮಗುವಿಗೆ ಸಾಮಾನ್ಯ ಜ್ವರ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ.
ರೋಗಿ-261:ಬೆಂಗಳೂರಿನ ಅನಂತಪುರದ ವ್ಯಕ್ತಿ 59 ವರ್ಷದ ವ್ಯಕ್ತಿಗೆ ಸೋಂಕು ಪಾಸಿಟಿವ್ ಇದ್ದು, ತೀವ್ರ ಉಸಿರಾಟದ ತೊಂದರೆ ಇದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೋಗಿ-262: ಬಾಗಲಕೋಟೆಯ 52 ವರ್ಷದ ವ್ಯಕ್ತಿಗೆ ಸೋಂಕು ದೃಢವಾಗಿದೆ. P-186 ರ ಸಂಪರ್ಕ ಹೊಂದಿದ್ದು, ಬಾಗಲಕೋಟೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ರೋಗಿ-263: ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಮದರಸಾ, ಮುದೋಳದಲ್ಲಿ ಕರ್ತವ್ಯ ನಿರತ ಪೊಲೀಸರಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಮುಂದುವರಿದಿದೆ.
ರೋಗಿ-264:ನಂಜನಗೂಡು ಮೈಸೂರಿನ 41 ವರ್ಷದ ವ್ಯಕ್ತಿಗೆ ಸೋಂಕು ಪಾಸಿಟಿವ್ ಬಂದಿದೆ. ಇವರು ಫಾರ್ಮಾ ಕಂಪನಿಯ ನೌಕರರಾಗಿದ್ದು, ಮೈಸೂರಿನಲ್ಲಿ ಚಿಕಿತ್ಸೆ ಮುಂದುವರೆದಿದೆ.
ರೋಗಿ-265: ಮೈಸೂರಿನ 30 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ರೋಗಿ-266: ನಂಜನಗೂಡು- ಮೈಸೂರಿನ 27 ವರ್ಷದ ವ್ಯಕ್ತಿಗೆ ಸೋಂಕು ಪಾಸಿಟಿವ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ರೋಗಿ-267: ಮೈಸೂರಿನ 35 ವರ್ಷದ ವ್ಯಕ್ತಿಗೆ ಸೋಂಕು ಪಾಸಿಟಿವ್ ಬಂದಿದೆ.
ರೋಗಿ-268: ಮೈಸೂರಿನ 26 ವರ್ಷದ ವ್ಯಕ್ತಿಗೆ ಸೋಂಕು ದೃಢ. ಫಾರ್ಮಾ ಕಂಪನಿಯ ನೌಕರರಾಗಿದ್ದಾರೆ.