ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮತ್ತೆ ಮೂವರಲ್ಲಿ ಕೊರೊನಾ ಸೋಂಕು ದೃಢ: 18ಕ್ಕೇರಿದ ಸೋಂಕಿತರ ಸಂಖ್ಯೆ - ಕೊರೊನಾ ಸುದ್ದಿ

ರಾಜ್ಯದಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 18 ತಲುಪಿದೆ.

corona
ಕೊರೊನಾ

By

Published : Mar 21, 2020, 2:30 PM IST

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 18 ಕ್ಕೆ ಏರಿಕೆಯಾಗಿದೆ.

ಇವತ್ತು ಪತ್ತೆಯಾದ ಮೂರು ಪ್ರಕರಣಗಳಲ್ಲಿ ಇಬ್ಬರು ಸೋಂಕಿತರ ಮಾಹಿತಿಯನ್ನು ಆರೋಗ್ಯ ಇಲಾಖೆಯ ಹೆಲ್ತ್​ ಬುಲೆಟಿನ್ ತಿಳಿಸಿರುವುದಿಲ್ಲ.

ಕೊರೊನಾ
ರಾಜ್ಯದ ಕೆಲವು ಭಾಗಗಳಲ್ಲಿ ಕೊರೊನಾ ವೈರಸ್​ ಹೆಚ್ಚಾಗಿ ಕಂಡು ಬಂದಿದ್ದು, ರೋಗಾಣು ಹರಡದಂತೆ‌ ತುರ್ತು ನಿಯಂತ್ರಣ ಕಾರ್ಯ ಕೈಗೊಳ್ಳಬೇಕಾಗಿದೆ. ಈ ತಿಂಗಳ ಅಂತ್ಯದವರೆಗೆ ಸಾರ್ವತ್ರಿಕ ರಜಾ ದಿನಗಳೂ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ರಜಾ ಪಡೆಯದೆ ಕೆಲಸ ನಿರ್ವಹಿಸಬೇಕೆಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಸಂಬಂಧ ಟ್ವೀಟ್​ ಮಾಡಿರುವ ಆರೋಗ್ಯ ಸಚಿವ ಶ್ರೀರಾಮಲು, ರಾಜ್ಯದಲ್ಲಿ ಇಂದು 3 ಜನರಲ್ಲಿ ಕೊವಿಡ್​ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 18 ತಲುಪಿದೆ. ನಾಗರಿಕರು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತಪ್ಪದೆ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ABOUT THE AUTHOR

...view details