ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಆರೋಪ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿಲಕ್ಷ್ಮೀ ಮತ್ತು ಕೆಂಪೇಗೌಡ ಎಂಬುವರಿಗೆ ನಿರೀಕ್ಷಣಾ ಜಾಮೀನು ನೀಡಲು ನಗರದ 66ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.
ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ, ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮತ್ತು ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿ ಲಕ್ಷ್ಮಿ,ಕೆಂಪೇಗೌಡ ಸಲ್ಲಿಸಿದ್ದ ಪ್ರತ್ಯೇಕ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಧೀಶ ಸಿ.ಆರ್. ಹೇಮಂತ್ ಕುಮಾರ್ ಅವರಿದ್ದ ಪೀಠ ಆದೇಶಿಸಿದೆ. ಇದರೊಂದಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಬಂಧನ ಭೀತಿ ಹೆಚ್ಚಾಗಿದೆ.