ಬೆಂಗಳೂರು: ಮುಂದೆ ಏನಾದರೂ ಪಕ್ಷ ನೀಡಿದ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾದಿಂದ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿರುವ ಸಂಬಂಧ ಟ್ವೀಟ್ ಮಾಡಿರುವ ಅವರು, ಬೂತ್ ಮಟ್ಟದಿಮದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೆ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದು, ಮುಂದೆಯೂ ಅದೇ ಭಾವದಿಂದ ಕೆಲಸ, ಪಕ್ಷ ನೀಡಿದ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾ ನಡೆಸುತ್ತೇನೆ ಎಂದು ಟೀಟ್ದಲ್ಲಿ ಬರೆದುಕೊಂಡಿದ್ದಾರೆ.
ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಜವಾಬ್ದಾರಿ ನೀಡಿ ಅವಕಾಶ ಮಾಡಿಕೊಟ್ಟ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಈ ಜವಾಬ್ದಾರಿ ನನಗೆ ಬಹಳಷ್ಟು ಅನುಭವ ಮತ್ತು ಬದುಕಿಗೆ ಹೊಸ ಆಯಾಮಗಳನ್ನು ನೀಡಿದೆ. ಬೂತ್ ಮಟ್ಟದ ಕಾರ್ಯಕರ್ತನಿಂದ ಹಿಡಿದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದ ವರೆಗಿನ ನನ್ನ ಪಯಣದಲ್ಲಿ ನಿರಂತರವಾಗಿ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಅದೇ ಭಾವದಿಂದ ಕೆಲಸ, ಪಕ್ಷ ನೀಡಿದ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾ ನಡೆಸುತ್ತೇನೆ. ಭಾರತ್ ಮಾತಾ ಕಿ ಜೈ ಎಂದು ಟ್ವೀಟ್ ಮಾಡಿದ್ದಾರೆ.
ಸಿ.ಟಿ.ರವಿ ಅವರನ್ನು 2020ರಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿತ್ತು. ಇದೀಗ ಹೈಕಮಾಂಡ್ ಸಿ ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿದೆ. ಈ ಹಿನ್ನೆಲೆ ಅವರು ಅಂದಿನ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಸಿ.ಟಿ.ರವಿ ಹೆಸರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಲವಾಗಿ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಸಿ ಟಿ ರವಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೊಕ್ ನೀಡಿರುವುದು ಸಾಕಷ್ಟು ಅನುಮಾನ ಮೂಡಿದೆ.
ಬಿಜೆಪಿ ಹೈ ಕಮಾಂಡ್ ಸಿ ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಹೊಣೆಗಾರಿಕೆ ನೀಡಲಿದೆಯಾ ಎಂಬ ಅನುಮಾನ ಮೂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುವ ಹಿನ್ನೆಲೆ ಸಿ ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೊಣೆಯಿಂದ ಬಿಡುಗಡೆ ಗೊಳಿಸಲಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಬಿಜೆಪಿಯಲ್ಲಿ ಎರಡು ಹುದ್ದೆ ಅಲಂಕರಿಸುವ ಹಾಗಿಲ್ಲ ಎಂಬ ನಿಯಮವಿದೆ. ಹೀಗಾಗಿ ಸಿ ಟಿ ರವಿಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಗೊಳಿಸಿ, ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡುವ ಇರಾದೆ ಪಕ್ಷದ ವರಿಷ್ಠರದ್ದು ಎಂಬ ಮಾತುಗಳಿಗೆ ಇದೀಗ ಬಲವಾಗಿ ಕೇಳಿ ಬಂದಿದೆ.
ಇದೀಗ ಈ ಬೆಳವಣಿಗೆ ಈ ಸುದ್ದಿಗೆ ಇನ್ನುಷ್ಟು ಇಂಬು ನೀಡಿದೆ. ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾಲಾವಧಿ ಮುಗಿದಿದ್ದು, ಆ ಸ್ಥಾನಕ್ಕೆ ಬಿಜೆಪಿ ಪಾಳಯದಲ್ಲಿ ಸಾಕಷ್ಟು ಲಾಬಿ ನಡೆಯುತ್ತಿದೆ. ಇತ್ತ ವಿಪಕ್ಷ ನಾಯಕನನ್ನೂ ನೇಮಿಸದಿರುವುದು ಸಾಕಷ್ಟು ಅಚ್ಚರಿ ಹಾಗೂ ಟೀಕೆಗೆ ಕಾರಣವಾಗಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ನೇಮಕ ಸನ್ನಿಹಿತವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.
ಇದನ್ನೂಓದಿ:ಭಿನ್ನಮತ ಶಮನಕ್ಕೆ ಮುಂದಾದ ಹೈಕಮಾಂಡ್: ಆಗಸ್ಷ್ 2 ರಂದು ದೆಹಲಿಯಲ್ಲಿ ರಾಜ್ಯ ಕೈ ನಾಯಕರೊಂದಿಗೆ ಸಭೆ