ಕರ್ನಾಟಕ

karnataka

ETV Bharat / state

ಶುಲ್ಕ ರಸೀದಿ ತೋರಿಸಿದರೆ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅವಕಾಶ ಕಲ್ಪಿಸುತ್ತಿದೆ ಬಿಎಂಟಿಸಿ

2019-20ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಥಿ ಪಾಸ್​ ಅಥವಾ ಪ್ರಸ್ತುತ ಸಾಲಿನಲ್ಲಿ ಶಾಲಾ-ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ವಾಸ ಸ್ಥಳದಿಂದ ಶಾಲಾ/ಕಾಲೇಜಿನವರೆಗೆ ಪ್ರಯಾಣಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ.

Online application for BMTC Bus Pass
ಶುಲ್ಕ ರಸೀದಿ ತೋರಿಸಿದರೆ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ಬಿಎಂಟಿಸಿ

By

Published : Jan 2, 2021, 4:46 PM IST

ಬೆಂಗಳೂರು:ರಾಜ್ಯ ಸರ್ಕಾರದ ನಿರ್ದೇಶನದಂತೆ ಶಾಲಾ-ಕಾಲೇಜುಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುವಾಗುವಂತೆ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಥಿ ಪಾಸ್​ ಅಥವಾ ಪ್ರಸ್ತುತ ಸಾಲಿನಲ್ಲಿ ಶಾಲಾ-ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ವಾಸ ಸ್ಥಳದಿಂದ ಶಾಲಾ/ಕಾಲೇಜಿನವರೆಗೆ ಪ್ರಯಾಣಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ.

  • 6 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು.
  • 12ನೇ ತರಗತಿ (ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು)
  • ಪದವಿ/ ಸ್ನಾತಕೋತ್ತರ ಡಿಪ್ಲೊಮಾ/ ತಾಂತ್ರಿಕ/ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸಬಹುದು.

ವಿದ್ಯಾರ್ಥಿಗಳು 2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್​​ಗಾಗಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಿ, ಬೆಂಗಳೂರು ಒನ್ ಕೇಂದ್ರಗಳಲ್ಲಿ ಶೀಘ್ರವಾಗಿ ಪಡೆಯಬಹುದಾಗಿದೆ.

ಓದಿ: ಬಿಎಂಟಿಸಿ ನೌಕರರ ಹಾಜರಾತಿ ಮತ್ತು ರಜೆ ನಿರ್ವಹಣೆಗೆ “ನಮ್ಮ ಸಾರಿಗೆ” ಆ್ಯಪ್

ವಿದ್ಯಾರ್ಥಿ ಬಸ್ ಪಾಸ್​ ಆನ್​ಲೈನ್ ಅರ್ಜಿಯನ್ನು ಸಂಸ್ಥೆಯ ವೆಬ್ ಸೈಟ್ (https://mybmtc.karnataka.gov.in) ಅಥವಾ ಸೇವಾ ಸಿಂಧು ಪೋರ್ಟಲ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.

ABOUT THE AUTHOR

...view details