ಕರ್ನಾಟಕ

karnataka

ಉಪಚುನಾವಣೆಗೆ ತಡೆಯಾಜ್ಞೆ ಕೋರಿ ಸುಪ್ರೀಂಗೆ ಅನರ್ಹ ಶಾಸಕರ ಮೊರೆ?

ಕೇಂದ್ರ ಚುನಾವಣಾ ಆಯೋಗವು ರಾಜ್ಯ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ನಿರ್ಧಾರ ಪ್ರಶ್ನಿಸಿ ಸೋಮವಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಲಿದ್ದಾರೆ.

By

Published : Sep 21, 2019, 6:06 PM IST

Published : Sep 21, 2019, 6:06 PM IST

ಅನರ್ಹ ಶಾಸಕರು

ಬೆಂಗಳೂರು: ಕೇಂದ್ರ ಚುನಾವಣೆ ಆಯೋಗ 15 ಕ್ಷೇತ್ರಗಳಿಗೆ ಉಪಚುನಾವಣೆಗೆ ವೇಳಾಪಟ್ಟಿ ಘೋಷಿಸಿದ ನಿರ್ಧಾರ ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್​ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅನರ್ಹ ಶಾಸಕರು

ಅನರ್ಹತೆ ಪ್ರಕರಣದ ಅರ್ಜಿ ಇತ್ಯರ್ಥ ಪಡಿಸುವವರೆಗೆ ಉಪಚುನಾವಣೆ ನಡೆಸಲು ಅವಕಾಶ ನೀಡಬಾರದು. ಅಕ್ಟೋಬರ್ 21ರಂದು ನಡೆಯುವ ಉಪಚುನಾವಣೆಗೆ ತಡೆಯಾಜ್ಞೆ ನೀಡಬೇಕೆಂದು ಸುಪ್ರೀಂಕೋರ್ಟ್​ನಲ್ಲಿ ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.

ಉಪಚುನಾವಣೆ ವೇಳಾಪಟ್ಟಿ ಘೋಷಣೆ ನಂತರ, ಸಭೆ ಸೇರಿ ಚರ್ಚೆ ನಡೆಸಿದ ಅನರ್ಹ ಶಾಸಕರು ಸೋಮವಾರ ಸುಪ್ರೀಂಕೋರ್ಟ್​ನಲ್ಲಿ ಚುನಾವಣೆ ಆಯೋಗದ ಕ್ರಮವನ್ನು ಪ್ರಶ್ನಿಸಲಿದ್ದಾರೆ.

ನವೆಂಬರ್ ಅಥವಾ ಡಿಸೆಂಬರ್​ನಲ್ಲಿ ಉಪಚುನಾವಣೆ ನಡೆಯಬಹುದೆಂದು ನಿರೀಕ್ಷೆ ಮಾಡಿದ್ದ ಅನರ್ಹ ಶಾಸಕರಿಗೆ, ಏಕಾಏಕಿ ಕೇಂದ್ರ ಚುನಾವಣೆ ಆಯೋಗ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿರುವುದು ಶಾಕ್ ನೀಡಿದೆ.

ABOUT THE AUTHOR

...view details