ಬೆಂಗಳೂರು:ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಲಾಗಿದೆ.
ಒಂಬತ್ತು ಜಂಟಿ ಸಮಿತಿ ಹಾಗೂ ಆರು ವಿಧಾನಸಭೆಯ ಸಮಿತಿಗಳು ಸೇರಿ ಒಟ್ಟು 15 ವಿಧಾನಮಂಡಲ ಸಮಿತಿಗಳನ್ನು ರಚಿಸಲಾಗಿದ್ದು, ಇಂದಿನಿಂದ ಜಾರಿಗೆ ಬರುವಂತೆ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.
ಯಾವ ಸಮಿತಿಗೆ ಯಾರು ಅಧ್ಯಕ್ಷರು?:
ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ: ಅಧ್ಯಕ್ಷ ಹೆಚ್ ಕೆ ಪಾಟೀಲ್
ಸಾರ್ವಜನಿಕ ಉದ್ದಿಮೆಗಳ ಸಮಿತಿ: ಅಧ್ಯಕ್ಷ ಅರವಿಂದ ಲಿಂಬಾವಳಿ
ಅನುಸೂಚಿತ ಜಾತಿ ಹಾಗೂ ಪಂಗಡಗಳ ಕಲ್ಯಾಣ ಸಮಿತಿ: ಅಧ್ಯಕ್ಷ ಎಸ್.ಅಂಗಾರ
ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ: ಅಧ್ಯಕ್ಷ ಎಸ್.ಕುಮಾರ್ ಬಂಗಾರಪ್ಪ
ಅಧೀನ ಶಾಸನ ರಚನಾ ಸಮಿತಿ: ಅಧ್ಯಕ್ಷ ಎಸ್ ಎ ರಾಮದಾಸ್
ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ: ಅಧ್ಯಕ್ಷ ಸಾ ರಾ ಮಹೇಶ್