ಬೆಂಗಳೂರು: ಕರ್ನಾಟಕ ವಿಧಾನಮಂಡಲದ / ವಿಧಾನಸಭೆಯ 9 ವಿವಿಧ ಸ್ಥಾಯಿ ಸಮಿತಿಗಳಿಗೆ 2020-21ನೇ ಸಾಲಿನ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಲೆಕ್ಕಪತ್ರಗಳ ಸ್ಥಾಯಿ ಸಮಿತಿಗೆ ಶಾಸಕ ರಾಮಲಿಂಗಾರೆಡ್ಡಿ, ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ, ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಅಂಗಾರ ಎಸ್., ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ದಿನಕರ್ ಕೇಶವ ಶೆಟ್ಟಿ, ಅಧೀನ ಶಾಸನ ರಚನಾ ಸಮಿತಿಗೆ ಎಸ್. ಕುಮಾರ್ ಬಂಗಾರಪ್ಪ, ಸಭೆಯ ಮುಂದಿಡಲಾದ ಕಾಗದಪತ್ರಗಳ ಸಮಿತಿಗೆ ಸಾ.ರಾ. ಮಹೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಕೆ. ಪೂರ್ಣಿಮಾ, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ಜಿ. ಸೋಮಶೇಖರ್ ರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಇನ್ನು ಗ್ರಂಥಾಲಯ ಸಮಿತಿಯಲ್ಲಿ ವಿಧಾನಸಭೆ ಸಭಾಧ್ಯಕ್ಷರು ಹಾಗೂ ವಿಧಾನಪರಿಷತ್‌ನ ಸಭಾಪತಿಗಳು ಸದಸ್ಯರಾಗಿರುವುದರಿಂದ ನಿಯಮಗಳ ಪ್ರಕಾರ ಗ್ರಂಥಾಲಯ ಸಮಿತಿಗೆ ವಿಧಾನಪರಿಷತ್ ಸಭಾಪತಿಗಳನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.